ಮಂಗಳೂರು ಸಿಸಿಬಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2023-09-20 17:02 GMT

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ಸುಮಾರು 7 ತಿಂಗಳುಗಳಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯೋರ್ವನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಮಂಗಳೂರು ತಾಲೂಕು ಫೈಸಲ್‌ ನಗರದ ತಲ್ಲತ್ (39) ಬಂಧಿತ ಆರೋಪಿ. ಈತನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಗೆ ಹಸ್ತಾಂತರಿಸಿದ್ದಾರೆ.

ಆರೋಪಿಯು ಹಲ್ಲೆ, ಕೊಲೆಯತ್ನ, ಅಪಹರಣ, ಹಫ್ತಾ ವಸೂಲಿ, ದರೋಡೆ, ಕೊಲೆ ಸಹಿತ ಹಲವಾರು ಪ್ರಕರಣಗಳಲ್ಲಿ ಭಾಗಿಯಾಗಿ ನ್ಯಾಯಾಲಯದಿಂದ ಜಾಮೀನಿನಲ್ಲಿ ಬಿಡುಗಡೆಗೊಂಡ ಬಳಿಕ ನ್ಯಾಯಾಲಯಕ್ಕೆ ವಿಚಾರಣೆ ಸಮಯ ಹಾಜರಾಗದೇ ತಲೆಮರೆಸಿಕೊಂಡಿದ್ದ ಎನ್ನಲಾಗಿದೆ.

ಆರೋಪಿ 2004ನೇ ಇಸವಿಯಲ್ಲಿ ಹಲ್ಲೆ ಪ್ರಕರಣ ನಂತರ ಮಂಗಳೂರು ಗ್ರಾಮಾಂತರ, ಕಂಕನಾಡಿ ನಗರ, ಕೊಣಾಜೆ, ಬರ್ಕೆ, ಮುಂಬೈ ಮುಂತಾದ ಕಡೆಗಳಲ್ಲಿ ಹಲ್ಲೆ, ಜೀವ ಬೆದರಿಕೆ, ಹಫ್ತಾ ವಸೂಲಿ, ದರೋಡೆ, ಕೊಲೆ ಯತ್ನ, ಕೊಲೆ, ಕರ್ತವ್ಯದಲ್ಲಿದ್ದ ಪೊಲೀಸರ ಮೇಲೆ ಹಲ್ಲೆ, ಅಪಹರಣ ಹೀಗೆ ಒಟ್ಟು 28 ಪ್ರಕರಣಗಳಲ್ಲಿ ಭಾಗಿಯಾಗಿರುತ್ತಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್  ಮಾರ್ಗದರ್ಶನದಲ್ಲಿ ಸಿಸಿಬಿ ಪೊಲೀಸರು ಆರೋಪಿ ಪತ್ತೆ ಕಾರ್ಯವನ್ನು ಕೈಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News