ಮಂಗಳೂರು ದಸರಾ ಮೆರವಣಿಗೆ ಆರಂಭ

Update: 2023-10-24 15:15 GMT

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ವತಿಯಿಂದ ನಡೆಯುವ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆ ಇಂದು ಸಂಜೆ ಕುದ್ರೋಳಿಯಿಂದ ಆರಂಭಗೊಂಡಿದೆ.

ಕುದ್ರೊಳಿ ಕ್ಷೇತ್ರದ ಆಧುನೀಕರಣದ ರೂವಾರಿ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿಯವರ ಉಪಸ್ಥಿತಿಯಲ್ಲಿ ಶ್ರೀ ಕುದ್ರೋಳಿ ಶ್ರೀಗೋಕರ್ಣನಾಥ ಕ್ಷೇತ್ರದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಮಹಾಗಣಪತಿ, ಶಾರದಾ ಮಾತೆಯೊಂದಿಗೆ ನವದುರ್ಗೆಯರಾದ ಶೈಲಪುತ್ರಿ, ಬ್ರಹ್ಮಚಾರಿಣಿ, ಚಂದ್ರಘಂಟಿ, ಕೂಷ್ಮಾಂಡಿನಿ, ಸ್ಕಂದ ಮಾತಾ, ಕಾತ್ಯಾಯಿನಿ, ಮಹಾಕಾಳಿ, ಮಹಾಗೌರಿ, ಸಿದ್ಧಿಧಾತ್ರಿಯರ ಪೂಜೆ ಯೊಂದಿಗೆ ಮೆರವಣಿಗೆ ಆರಂಭಗೊಂಡಿದೆ.

ಸಮಾರಂಭದಲ್ಲಿ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಆಡಳಿತ ಮಂಡಳಿಯ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಉಪಾಧ್ಯಕ್ಷ ಊರ್ಮಿಳಾ ರಮೇಶ್ ಕೋಶಾಧಿಕಾರಿ ಪದ್ಮರಾಜ್ ಆರ್. ಪ್ರಧಾನ ಕಾರ್ಯದರ್ಶಿ ಮಾಧವ ಸುವರ್ಣ, ಸಮಿತಿ ಸದಸ್ಯರಾದ ಕೆ. ಮಹೇಶ್ಚಂದ್ರ, ರವಿಶಂಕರ್ ಮಿಜಾರ್, ಎಂ. ಶೇಖರ ಪೂಜಾರಿ, ಸಂತೋಷ್ ಕುಮಾರ್, ಜಗದೀಪ್ ಡಿ. ಸುವರ್ಣ, ದೇವೇಂದ್ರ ಪೂಜಾರಿ, ಡಾ.ಅನಸೂಯ ಬಿ.ಟಿ. ಸಾಲಿಯಾನ್, ಕಿಶೋರ್ ಯೆಯ್ಯಾಡಿ, ಚಂದನ್, ಡಾ. ಬಿ.ಜಿ. ಸುವರ್ಣ, ವಾಸುದೇವ ಕೋಟ್ಯಾನ್, ಹರಿಕೃಷ್ಣ ಬಂಟ್ವಾಳ, ರಾಧಾಕೃಷ್ಣ, ಚಿತ್ತರಂಜನ್ ಗರೋಡಿ, ರಮಾನಾಥ ಕಾಂದೂರು ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ದಸರಾ ಮಹೋತ್ಸವದ ಅಂಗವಾಗಿ ಶ್ರೀ ಕ್ಷೇತ್ರ ಕುದ್ರೋಳಿ ಗೋಕರ್ಣನಾಥೇಶ್ವರ ದೇವಾಲಯದಲ್ಲಿ ಪ್ರತಿನಿತ್ಯ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮ, ಅನ್ನದಾನ ನಡೆದು ಸಂಜೆ ಮಂಗಳೂರು ದಸರಾ ಮೆರವಣಿಗೆ ಆರಂಭಗೊಂಡಿದೆ. ದೇವಾಲಯದ ಆವರಣದಲ್ಲಿ ಹುಲಿ ವೇಶಗಳ ತಂಡದಿಂದ ಪ್ರದರ್ಶನ, ವಿವಿಧ ಟ್ಯೋಬ್ಲೋಗಳು, ದೀಪಾಲಂಕಾರ ಮೆರವಣಿಗೆಗೆ ಮೆರುಗು ನೀಡಿದೆ.






 


 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News