ಮಂಗಳೂರು: ಅನಿಯಮಿತ ವಿದ್ಯುತ್ ಕಡಿತಕ್ಕೆ ಡಿವೈಎಫ್‌ಐ ಆಕ್ರೋಶ

Update: 2023-08-12 12:18 GMT

ಮಂಗಳೂರು: ಕಳೆದೊಂದು ವಾರಗಳಿಂದ ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿ (ಮೆಸ್ಕಾಂ) ಯಾವುದೇ ಸೂಚನೆಯಿಲ್ಲದೆ ಲೋಡ್ ಶೆಡ್ಡಿಂಗ್ ನಡೆಸುತ್ತಿರುವುದು ಖಂಡನೀಯ ಎಂದು ಆಪಾದಿಸಿರುವ ಡಿವೈಎಫ್‌ಐ, ರಾಜ್ಯ ಸರಕಾರ ಗೃಹಜ್ಯೋತಿ ಯೋಜನೆ ಜಾರಿ ಮಾಡಿರುವ ಬೆನ್ನಲ್ಲೇ ದಿನನಿತ್ಯ ಲೋಡ್ ಶೆಡ್ಡಿಂಗ್ ಮಾಡುತ್ತಿರುವುದು ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಸಿದುಕೊಳ್ಳುವ ನೀತಿ ಎಂದು ಆಕ್ರೋಶ ವ್ಯಕ್ತಪಡಿಸಿದೆ.

ಅನಿಯಮಿತ ಲೋಡ್ ಶೆಡ್ಡಿಂಗ್ ಬಗ್ಗೆ ಮೆಸ್ಕಾಂ ಅಧಿಕಾರಿಗಳನ್ನು ಕೇಳಿದರೆ ಸಮರ್ಪಕ ಉತ್ತರ ಸಿಗುತ್ತಿಲ್ಲ. ಮೆಸ್ಕಾಂ ಕಚೇರಿಗಳಲ್ಲಿರುವ ಸಿಬ್ಬಂದಿಗೂ ಲೋಡ್ ಶೆಡ್ಡಿಂಗ್ ಬಗ್ಗೆ ಮಾಹಿತಿ ಇಲ್ಲ. ವಿದ್ಯುತ್ ಅಭಾವವೇ, ಇಂಧನ ಕೊರತೆಯೇ, ವಿದ್ಯುತ್ ಖರೀದಿಗೆ ಹಣಕಾಸಿನ ಸಂಕಷ್ಟ ಇದೆಯೇ ಎಂಬುದರ ಬಗ್ಗೆ ಸರಕಾರ ಕೂಡಲೇ ಸಾರ್ವಜನಿಕ ಪ್ರಕಟನೆ ಹೊರಡಿಸಬೇಕು ಎಂದು ಡಿವೈಎಫ್‌ಐ ಆಗ್ರಹಿಸಿದೆ.

ಲೋಡ್ ಶೆಡ್ಡಿಂಗ್‌ನಿಂದ ರೈತರು, ವ್ಯಾಪಾರಸ್ಥರು ಮತ್ತು ಸಾರ್ವಜನಿಕರು ಬಹುತೇಕ ಸಮಸ್ಯೆಗಳನ್ನು ಅನುಭವಿಸು ವಂತಾಗಿದೆ. ಅಲ್ಲದೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯ ಹತ್ತಿರ ಬರುತ್ತಿದ್ದು, ಅವರ ಕಲಿಕೆಯ ಮೇಲೆ ಇದು ವ್ಯತಿರಿಕ್ತ ಪರಿಣಾಮ ಬೀರಲಿದೆ. ಮೆಸ್ಕಾಂ ಇಲಾಖೆ ಕೂಡಲೇ ಲೋಡ್ ಶೆಡ್ಡಿಂಗ್ ಕೈಬಿಟ್ಟು ಜನರಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡಲು ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮೆಸ್ಕಾಂ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವು ದಾಗಿ ಎಂದು ಡಿವೈಎಫ್‌ಐ ದ.ಕ. ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್ ಮತ್ತು ಕಾರ್ಯದರ್ಶಿ ಸಂತೋಷ್ ಬಜಾಲ್ ಎಚ್ಚರಿಕೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News