ಮಂಗಳೂರು: ನಕಲಿ ಪೊಲೀಸ್ ಅಧಿಕಾರಿ ಬೆನೆಡಿಕ್ಟ್ ಸಾಬೂ ಬಂಧನ

Update: 2023-08-20 13:38 GMT

ಬೆನೆಡಿಕ್ಟ್ ಸಾಬೂ

ಮಂಗಳೂರು, ಆ.20: ಪೊಲೀಸ್ ಅಧಿಕಾರಿ ಎಂದು ಬಿಂಬಿಸಿ ವಂಚಿಸಲು ಯತ್ನಿಸಿದ ನಗರದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬನನ್ನು ಉರ್ವ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ಕೇರಳದ ಇಡುಕ್ಕಿಯ ಬೆನೆಡಿಕ್ಟ್ ಸಾಬೂ (25) ಬಂಧಿತ ಆರೋಪಿಯಾಗಿದ್ದಾನೆ. ಈತ ನಗರದ ನರ್ಸಿಂಗ್ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಯಾಗಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕೇರಳದ ‘ರಾ’ ಅಧಿಕಾರಿ ಎಂದು ಈತ ಬಿಂಬಿಸಿ ವಂಚಿಸಲು ಯತ್ನಿಸಿದ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿಯಿಂದ ಅಗ್ರಿಕಲ್ಚರ್ ಹಾಗೂ ಫಾರ್ಮರ್ಸ್ ವೆಲ್ಫೇರ್ ಡಿಪಾರ್ಟೆಂಟ್‌ಮೆಂಟ್ ಕೇರಳ ಎಂಬ ನಕಲಿ ಐಡಿ, ಪಿಎಸ್ಸೈ ಸಮವಸ್ತ್ರ, ಪೊಲೀಸ್ ಶೂಸ್, ಲೋಗೋ, ಮೆಡಲ್, ಬೆಲ್ಟ್, ಕ್ಯಾಪ್, 1 ಲ್ಯಾಪ್‌ಟಾಪ್, 2 ಮೊಬೈಲ್ ವಶಪಡಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News