ಮಂಗಳೂರು: ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ

Update: 2024-02-27 16:45 GMT

ಮಂಗಳೂರು: ಸುರತ್ಕಲ್‌ನ ವಿದ್ಯಾದಾಯಿನಿ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ಮಂಗಳವಾರ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ.

10ನೇ ತರಗತಿಯ ಯಶವಿತ್ , ನಿರೂಪ್, ಅನ್ವಿತ್ ಮತ್ತು ರಾಘವೇಂದ್ರ ಎಂಬವರು ಇಂದು ಮಧ್ಯಾಹ್ನ 1:30ರ ಸುಮಾರಿಗೆ ಶಾಲೆಯಿಂದ ನಾಪತ್ತೆಯಾಗಿರುವುದಾಗಿ ಪೊಲೀಸರಿಗೆ ದೂರು ನೀಡಲಾಗಿದೆ.

ಒಂದೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಇಂದು ಇಂಗ್ಲಿಷ್ ಪೂರ್ವ ಸಿದ್ಧತಾ ಪರೀಕ್ಷೆ ಬರೆದು ನಂತರ ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News