ಮಂಗಳೂರು: ಬಾಲಕಿ ಆತ್ಮಹತ್ಯೆ

Update: 2023-09-10 15:09 GMT

ಮಂಗಳೂರು, ಸೆ.10: ಬಾಲಕಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಜೈ ಚರ್ಚ್ ರಸ್ತೆಯ ಅಪಾರ್ಟ್‌ಮೆಂಟ್ ಒಂದರಲ್ಲಿ ಶನಿವಾರ ರಾತ್ರಿ ನಡೆದಿರುವುದು ವರದಿಯಾಗಿದೆ.

ಆತ್ಮಹತ್ಯೆ ಮಾಡಿಕೊಂಡ 17ರ ಹರೆಯದ ಬಾಲಕಿ ತನ್ನ ತಾಯಿಯೊಂದಿಗೆ ನೆಲೆಸಿದ್ದಳು. ತಾಯಿ ಅದೇ ಅಪಾರ್ಟ್‌ಮೆಂಟ್‌ ನಲ್ಲಿ ಕ್ಲೀನಿಂಗ್ ಕೆಲಸ ನಿರ್ವಹಿಸುತ್ತಿದ್ದರು.

ಆತ್ಮಹತ್ಯೆ ಮಾಡಿಕೊಂಡ ಬಾಲಕಿ ದ್ವಿತೀಯ ಪಿಯುಸಿ ಓದುತ್ತಿದ್ದಳು. ಆಕೆಯ ಡೆತ್ ನೋಟ್ ಕೂಡ ಪತ್ತೆಯಾಗಿದ್ದು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.

ತಾಯಿಯ ದೂರಿನ ಮೇರೆಗೆ ಮಂಗಳೂರು ಪೂರ್ವ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News