ಮಂಗಳೂರು: ಬಂಟ್ಸ್ ಹಾಸ್ಟೆಲ್ ಗಣೇಶೋತ್ಸವ ಉದ್ಘಾಟನೆ

Update: 2024-09-07 14:14 GMT

ಮಂಗಳೂರು: ಸುಮಾರು 115 ವರ್ಷಗಳ ಇತಿಹಾಸ ಹೊಂದಿರುವ ಬಂಟರ ಮಾತೃಸಂಘದ ನೇತೃತ್ವದಲ್ಲಿ ಕಳೆದ 18 ವರ್ಷಗಳಿಂದ ಅತ್ಯಂತ ವ್ಯವಸ್ಥಿತವಾಗಿ ಆಯೋಜಿಸುತ್ತಿರುವ ಗಣೇಶೋತ್ಸವ ಕಾರ್ಯಕ್ರಮವು ಸಮಾಜಮುಖಿ ಕಾರ್ಯ ಗಳಿಗೆ ಪ್ರೇರಣೆ ನೀಡಲಿ ಎಂದು ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಹೇಳಿದರು.

ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನ ಓಂಕಾರ ನಗರದಲ್ಲಿ ಸೆ.7ರಿಂದ 9ರವರೆಗೆ ನಡೆಯುವ 18ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಕಾರ್ಯಕ್ರಮವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ಬುದ್ಧಿವಂತರ ಜಿಲ್ಲೆ ಎಂದೇ ಖ್ಯಾತಿಯುಳ್ಳ ದ.ಕ.ಜಿಲ್ಲೆಯ ಜನತೆ ಪ್ರಕೃತಿಗೆ ಹೆಚ್ಚಿನ ಮಹತ್ವ ನೀಡುವವರಾಗಿದ್ದಾರೆ. ಗಣೇಶೋತ್ಸವದ ಸಂದರ್ಭ ತೆನೆ ವಿತರಣೆ ಮಾಡುವ ಮೂಲಕ ದೇವರ ಆರಾಧನೆ ಜೊತೆಗೆ ಪ್ರಕೃತಿಯೊಂದಿಗೆ ನಮ್ಮ ಬದುಕನ್ನು ಜೋಡಿಸಿಕೊಂಡಿರುವುದು ಪ್ರಶಂಸನೀಯವಾಗಿದೆ ಎಂದು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನುಡಿದರು.

ಮೋಹನ್ ದೇವ ಆಳ್ವ ಸಾಂಕೇತಿಕ ತೆನೆ ವಿತರಿಸಿ ಮಾತನಾಡಿದರು. ಅಶ್ವಿನಿ ಮಣಿ ಮುಲ್ಲೈ ಮುಗಿಲನ್, ಡಾ. ಶೈಲಜಾ ಮೋಹನ ದೇವ ಆಳ್ವ ಹಾಗೂ ಜಯಂತಿ ಮೆನನ್ ಮುಖ್ಯ ಅತಿಥಿಗಳಾಗಿದ್ದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಪ್ರಧಾನ ಕಾರ್ಯದರ್ಶಿ ಕೆ.ಎಂ.ಶೆಟ್ಟಿ, ಕೋಶಾಧಿಕಾರಿ ಸಿಎ ರಾಮ ಮೋಹನ್ ರೈ, ಸಿದ್ಧಿ ವಿನಾಯಕ ಪ್ರತಿಷ್ಠಾನದ ಟ್ರಸ್ಟಿಗಳಾದ ಡಾ. ಆಶಾಜ್ಯೋತಿ ರೈ, ರವಿರಾಜ್ ಶೆಟ್ಟಿ ನಿಟ್ಟೆಗುತ್ತು, ಕೃಷ್ಣ ಪ್ರಸಾದ್ ರೈ, ಗಣೇಶೋತ್ಸವ ಸಮಿತಿಯ ಸಂಚಾಲಕರಾದ ದಿವಾಕರ ಸಾಮಾನಿ ಚೇಳಾರ್‌ಗುತ್ತು, ಅಶ್ವತ್ಥಾಮ ಹೆಗ್ಡೆ, ಮನೀಶ್ ರೈ, ಸಂತೋಷ್ ಶೆಟ್ಟಿ ಶೆಡ್ಡೆ ಉಪಸ್ಥಿತರಿದ್ದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಕೆ. ಅಜಿತ್ ಕುಮಾರ್ ರೈ ಮಾಲಾಡಿ ಸ್ವಾಗತಿಸಿದರು. ತಾಲೂಕು ಸಮಿತಿಯ ಸಂಚಾಲಕ ವಸಂತ ಶೆಟ್ಟಿ ವಂದಿಸಿದರು. ಸತೀಶ್ ಶೆಟ್ಟಿ ಕೊಡಿಯಾಲ್‌ಬೈಲ್ ಹಾಗೂ ಕವಿತಾ ಪಕ್ಕಳ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News