ಮಂಗಳೂರು: ಬ್ಯಾಂಕ್ ಆಫ್ ಬರೋಡಾದಲ್ಲಿ ಸ್ವಾತಂತ್ರ್ಯ ದಿನಾಚರಣೆ

Update: 2023-08-16 17:26 GMT

ಮಂಗಳೂರು, ಆ.16: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ (ಬ್ಯಾಂಕ್) ಸ್ವಾತಂತ್ರ್ಯ ದಿನಾಚರಣೆಯನ್ನು ರಾಷ್ಟ್ರವ್ಯಾಪಿ ಉಪಕ್ರಮಗಳೊಂದಿಗೆ ಆ. 15ರಂದು ಆಚರಿಸಿತು.

ಬ್ಯಾಂಕ್ ಆಫ್ ಬರೋಡಾದ ವ್ಯವಸ್ಥಾಪಕ ನಿರ್ದೇಶಕ ಮತ್ತು ಸಿಇಒ ದೇಬದತ್ತ ಚಂದ್ ಅವರು ಮಾತನಾಡಿ, ‘‘ನಾವು ಭಾರತದ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವಾಗ, ಬ್ಯಾಂಕ್ ಆಫ್ ಬರೋಡಾ, ರಾಷ್ಟ್ರಕ್ಕೆ ತನ್ನ ಬದ್ಧತೆಯನ್ನು ಪುನರುಚ್ಚರಿಸಿ, ದೇಶದ ಆರ್ಥಿಕ, ಸಾಮಾಜಿಕ ಮತ್ತು ಡಿಜಿಟಲ್ ಇಂಡಿಯಾವನ್ನು ಬೆಂಬಲಿಸುವ ಒಂದು ದೃಢವಾದ ಪಾಲುದಾರವಾಗಿದೆ. ರಾಷ್ಟ್ರದ ಪ್ರಗತಿಗೆ ಕೊಡುಗೆ ನೀಡುವುದನ್ನು ಮುಂದುವರಿಸುತ್ತಿದ್ದೇವೆ ಎಂದರು.

ಮಂಗಳೂರಿನ ವಿಜಯ ಟವರ್ಸ್‌ನಲ್ಲಿರುವ ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಲಯ ಕಚೇರಿಯಲ್ಲಿ ಉಪ ವಲಯ ಮುಖ್ಯಸ್ಥರಾದ ರಮೇಶ್ ಕಾನಡೆ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು.

ಪ್ರಧಾನ ವ್ಯವಸ್ಥಾಪಕಿ ಹಾಗೂ ವಲಯ ಮುಖ್ಯಸ್ಥೆ ಗಾಯತ್ರಿ ಆರ್ ಸಂದೇಶ ನೀಡಿ, ಮಂಗಳೂರು ವಲಯವು ಮಡಿಕೇರಿ ಯಿಂದ ಗುಲ್ಬರ್ಗದವರೆಗೆ 22 ಜಿಲ್ಲೆಗಳಲ್ಲಿ ಒಟ್ಟು 383 ಶಾಖೆಗಳನ್ನು ಹೊಂದಿದೆ ಎಂದರು.

ಡಿಜಿಎಂ- ನೆಟ್‌ವರ್ಕ್ ಅಶ್ವಿನಿ ಕುಮಾರ್, ಮಂಗಳೂರು ನಗರ ಪ್ರಾದೇಶಿಕ ವ್ಯವಸ್ಥಾಪಕ ಎಂ.ವಿ.ಎಸ್. ಪ್ರಸಾದ್ ಉಪಸ್ಥರಿದ್ದರು.








 


 


 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News