ಮಂಗಳೂರಿಗೆ ತಂಪೆರೆದ ಸಿಡಿಲು ಸಹಿತ ಮಳೆ

Update: 2024-04-20 03:48 GMT

ಮಂಗಳೂರು, ಎ.20: ಮಂಗಳೂರು ನಗರ ಮತ್ತು ಹೊರವಲಯದ ಹಲವು ಕಡೆ ಇಂದು ಮುಂಜಾನೆ ಸಿಡಿಲು, ಮಿಂಚು, ಗಾಳಿ ಸಹಿತ ಭಾರೀ ಮಳೆಯಾಗಿದೆ.

ಮುಂಜಾನೆ 4ರಿಂದ 5:30ರ ಮಧ್ಯೆ ಉತ್ತಮ ಮಳೆ ಸುರಿದಿದೆ. ಇದರಿಂದಾಗಿ ಗ್ರಾಮಾಂತರ ಪ್ರದೇಶದ ಕೆಲವು ಕಡೆಗಳಲ್ಲಿ ಮರಗಳು ರಸ್ತೆಗೆ ಬಿದ್ದಿದ್ದು, ಸಂಚಾರಕ್ಕೆ ಸಮಸ್ಯೆಯಾಗಿದೆ. ಕೆಲವೆಡೆ ವಿದ್ಯುತ್ ಕಂಬಗಳಿಗೆ ಹಾನಿಯಾಗಿದ್ದು, ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದೆ. ಮಂಗಳೂರು ನಗರದಲ್ಲಿ ಕೆಲವೆಡೆ ಮುಂಜಾನೆಯಿಂದ ವಿದ್ಯುತ್ ಮೊಟಕುಗೊಂಡಿದೆ.

ಮುಂದಿನ 3 ಗಂಟೆಗಳಲ್ಲಿ ದಕ್ಷಿಣ ಕನ್ನಡ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ, ತುಮಕೂರು, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅಲ್ಲಲ್ಲಿ ಬಲವಾದ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಇಂದು ಬೆಳಗ್ಗೆ 7 ಗಂಟೆಗೆ ಹೊರಡಿಸಿರುವ ಪ್ರಕಟನೆಯಲ್ಲಿ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News