ಮಂಗಳೂರು | ಬದ್ರಿಯಾ ಪ್ರಥಮ ದರ್ಜೆ ಕಾಲೇಜ್ ನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ

ಮಂಗಳೂರು : ಎ.15ರಿಂದ 21 ರವರೆಗೆ ನಡೆಯುವ ಬದ್ರಿಯಾ ಪ್ರಥಮ ದರ್ಜೆ ಕಾಲೇಜ್ ನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವು ಇಂದು ಸರಕಾರಿ ಪ್ರೌಢಶಾಲೆ (ಉರ್ದು) ಬಂದರು ಇಲ್ಲಿ ಉದ್ಘಾಟನೆ ಗೊಂಡಿತು.
"ಡಿಜಿಟಲ್ ಸಾಕ್ಷರತೆಗಾಗಿ ಯುವಜನತೆ - ನನ್ನ ಭಾರತಕ್ಕಾಗಿ ಯುವಜನತೆ" ಧ್ಯೇಯದೊಂದಿಗೆ ಕಾರ್ಯಕ್ರಮ ನಡೆಯಿತು.
ಬದ್ರಿಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಬಿ.ರಹಮತ್ ಆಲಿ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಮಂಗಳೂರು ಮಹಾನಗರ ಪಾಲಿಕೆ ಸದಸ್ಯರಾದ ಝೀನತ್ ಸಂಶುದ್ದೀನ್ ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಕೆ.ಅಶ್ರಫ್, ಮಂಗಳೂರು ಮಹಾನಗರ ಪಾಲಿಕೆಯ ಸದದ್ಯ ಅಬ್ದುಲ್ ಲತೀಫ್, ಬದ್ರಿಯಾ ವಿದ್ಯಾ ಸಂಸ್ಥೆಯ ಸಂಚಾಲಕರಾದ ಜನಾಬ್ ಪಿ.ಸಿ.ಹಾಸೀರ್, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬಿ.ಮುಹಮ್ಮದ್, ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ ಶಂಕರಪ್ಪ ಮುನ್ನಾಳ್, ಸಹಶಿಕ್ಷಕಿ ಡಾ.ಪರ್ವೀನ್, ಸ್ಥಳೀಯ ಮುಖಂಡರಾದ ಮುಹಮ್ಮದ್ ಸಂಶುದ್ದೀನ್ ಉಪಸ್ಥಿತರಿದ್ದರು.
