ಮಂಗಳೂರು: ಲಿಫ್ಟ್‌ನಲ್ಲಿ ಸಿಲುಕಿದ್ದ ಐದು ಮಂದಿಯ ರಕ್ಷಣೆ

Update: 2023-11-25 17:21 GMT

ಸಾಂದರ್ಭಿಕ ಚಿತ್ರ

ಮಂಗಳೂರು : ನಗರದ ಬೆಂದೂರ್‌ವೆಲ್‌ನ ಅಪಾರ್ಟ್‌ಮೆಂಟ್‌ವೊಂದರ ಲಿಫ್ಟ್‌ನಲ್ಲಿ ಸಿಲುಕಿದ್ದ ಐದು ವಿದ್ಯಾರ್ಥಿಗಳನ್ನು ಪಾಂಡೇಶ್ವರ ಅಗ್ನಿಶಾಮಕ ದಳದವರು ರಕ್ಷಣೆ ಮಾಡಿರುವ ಘಟನೆ ವರದಿಯಾಗಿದೆ.

ಶುಕ್ರವಾರ ಸಂಜೆ 6.30ರ ಸುಮಾರಿಗೆ ಲಿಫ್ಟ್ ಜಾಮ್ ಆಗಿತ್ತು. ಅದರೊಳಗೆ 5 ಮಂದಿ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದರು ಎನ್ನಲಾಗಿದೆ.

ಕೂಡಲೇ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಲಾಯಿತು. ಸುಮಾರು ಒಂದು ತಾಸು ಕಾರ್ಯಾಚರಣೆ ನಡೆಸಿದ ಅಗ್ನಿಶಾಮಕ ದಳದವರು ಸಿಲುಕಿಕೊಂಡ ಎಲ್ಲರನ್ನು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News