ದೇಶದ ರಾಜಕೀಯ ಚಿತ್ರಣ ಬದಲಾಗಲು ಮಂಗಳೂರಿನ ಫಲಿತಾಂಶ ನಾಂದಿ ಹಾಡಲಿದೆ : ಮಧು ಬಂಗಾರಪ್ಪ

Update: 2023-09-24 12:47 GMT

ಮಂಗಳೂರು, ಸೆ.24: ಮುಂದಿನ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಮತದಾರರು ಕಾಂಗ್ರೆಸ್ ಪಕ್ಷವನ್ನು ಕೈಹಿಡಿಯಲಿದ್ದಾರೆ. ಈ ಮೂಲಕ ದೇಶದ ರಾಜಕೀಯ ಚಿತ್ರಣ ಬದಲಾಗಲು ಮಂಗಳೂರಿನ ಫಲಿತಾಂಶ ನಾಂದಿ ಹಾಡಲಿದೆ ಎಂದು ಶಿಕ್ಷಣ ಸಚಿವ ಹಾಗೂ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಯ ಉಸ್ತುವಾರಿ ಮಧು ಬಂಗಾರಪ್ಪಅಭಿಪ್ರಾಯಪಟ್ಟಿದ್ದಾರೆ.

ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಆಯ್ಕೆಯ ಬಗ್ಗೆ ಅಭಿಪ್ರಾಯ ಸಂಗ್ರಹಿಸಲು ದ.ಕ. ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ರವಿವಾರ ನಡೆದ ಜಿಲ್ಲಾ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.

ಮತೀಯ, ಕೋಮುವಾದದ ಭಾವನಾತ್ಮಕ ವಿಚಾರಗಳಿಂದ ಜನ ವಿಮುಖರಾಗುತ್ತಿದ್ದಾರೆ. ಕಾಂಗ್ರೆಸ್ ಸರಕಾರ ಕೊಟ್ಟಿ ರುವ ಗ್ಯಾರೆಂಟಿಗಳು ಜನರ ಬದುಕನ್ನು ಬೆಳಗಿಸಿವೆ. ಇದರ ಪ್ರಭಾವ ಮುಂದಿನ ಚುನಾವಣೆಯಲ್ಲಿ ಪ್ರತಿಬಿಂಬಿತ ವಾಗಲಿದೆ. ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಕಾರ್ಯಕರ್ತರ, ಸಂಘಸಂಸ್ಥೆಗಳ, ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲು ಸರ್ವೆ ನಡೆಸಲಾ ಗುವುದು ಎಂದು ಮಧು ಬಂಗಾರಪ್ಪ ಹೇಳಿದರು.

ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಸಚಿವರಾದ ಬಿ ರಮಾನಾಥ್ ರೈ, ಅಭಯಚಂದ್ರ ಜೈನ್ ಮಾತನಾಡಿದರು.

ಮಾಜಿ ರಾಜ್ಯಸಭಾ ಸದಸ್ಯ ಬಿ. ಇಬ್ರಾಹಿಂ, ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕರಾದ ಜೆಆರ್ ಲೋಬೊ, ಐವನ್ ಡಿಸೋಜ, ಪಕ್ಷದ ಮುಖಂಡರಾದ ಇನಾಯತ್ ಅಲಿ, ಮಿಥುನ್ ರೈ, ಇಬ್ರಾಹೀಂ ಕೋಡಿಜಾಲ್, ಶಶಿದರ್ ಹೆಗ್ಡೆ, ಲುಕ್ಮಾನ್ ಬಂಟ್ವಾಳ್, ಮಮತಾ ಗಟ್ಟಿ, ಶಾಲೆಟ್ ಪಿಂಟೋ, ಕೃಪಾ ಆಳ್ವಾ, ಅಶ್ವಿನ್ ಕುಮಾರ್ ರೈ, ಪದ್ಮರಾಜ್ ಆರ್, ಜಿ ಕೃಷ್ಣಪ್ಪ, ಶಾಹುಲ್ ಹಮೀದ್ ವಿಶ್ವಾಸ್ ಕುಮಾರ್ ದಾಸ್, ನೀರಜ್ ಚಂದ್ರಪಾಲ್, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕದ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ನಾಯಕರು, ಮನಪಾ ಸದಸ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News