ಮಂಗಳೂರು: ರಸ್ತೆ ಸುರಕ್ಷತಾ ಕ್ರಮಗಳ ಕಾನೂನು ಕಾರ್ಯಾಗಾರಕ್ಕೆ ಚಾಲನೆ

Update: 2023-09-30 08:50 GMT

ಮಂಗಳೂರು,ಸೆ.30: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಮಂಗಳೂರು ವಕೀಲರ ಸಂಘ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪೊಲೀಸ್ ಹಾಗೂ ಸಾರಿಗೆ ಇಲಾಖೆಯ ಸಹಯೋಗದಲ್ಲಿ ಸೆ.30ರ ಶನಿವಾರ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಂಡ ರಸ್ತೆ ಸುರಕ್ಷತಾ ಕ್ರಮಗಳ ಕಾನೂನು ಕಾರ್ಯಗಾರವನ್ನು ರಾಜ್ಯ ಹೈಕೋರ್ಟ್‍ನ ನ್ಯಾಯಾಧೀಶರು ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರಾದ ನ್ಯಾಯಮೂರ್ತಿ ಜಿ. ನರೇಂದರ್ ಅವರು ಚಾಲನೆ ನೀಡಿದರು.

ರಾಜ್ಯ ಹೈಕೋರ್ಟ್‍ನ ನ್ಯಾಯಾಧೀಶರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅಧ್ಯಕ್ಷ ಸ್ಥಾನ ಅಲಂಕರಿಸಿದ್ದರು. ರಾಜ್ಯ ಹೈಕೋರ್ಟ್ ನ್ಯಾಯಾಧೀಶರು ಹಾಗೂ ಹೈಕೋರ್ಟ್ ಕಾನೂನು ಸೇವಾ ಸಮಿತಿ ಅಧ್ಯಕ್ಷರಾದ ನ್ಯಾಯಮೂರ್ತಿ ಕೆ. ಸೋಮಶೇಖರ್ ಘನ ಉಪಸ್ಥಿತಿ ವಹಿಸಿದ್ದರು. ಗೌರವ ಅತಿಥಿಗಳಾಗಿ ಅಡ್ವೊಕೇಟ್ ಜನರಲ್ ಕೆ. ಶಶಿ ಕಿರಣ್ ಶೆಟ್ಟಿ ಭಾಗವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ವೇದಿಕೆಯಲ್ಲಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ನಗರ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್, ವಕೀಲರ ಸಂಘದ ಅಧ್ಯಕ್ಷ ಕೆ. ಪೃಥ್ವಿರಾಜ್ ರೈ, ಪೊಲೀಸ್ ಅಧೀಕ್ಷಕ ಸಿ.ಬಿ. ರಿಷ್ಯಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆನಂದ್ ಕೆ. ಹಾಗೂ ಇತರೆ ಗಣ್ಯರು ವೇದಿಕೆಯಲ್ಲಿದ್ದರು.

ಸಾರಿಗೆ ಉಪ ಆಯುಕ್ತ ರವಿಶಂಕರ್ ಪಿ, ಸುಪ್ರೀಂ ಕೋರ್ಟ್ ಹಿರಿಯ ವಕೀಲರಾದ ಅರುಣ್ ಮೋಹನ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಎಚ್.ಆರ್. ತಿಮ್ಮಯ್ಯ, ಕರ್ನಾಟಕ ಹೈಕೋರ್ಟ್ ವಕೀಲರಾದ ಕೃಷ್ಣಸ್ವಾಮಿ, ಕರ್ನಾಟಕ ಹೈಕೋರ್ಟ್ ವಕೀಲರಾದ ಶಂಕರ್ ರೆಡ್ಡಿ ಸೇರಿದಂತೆ ಹಲವರು ಭಾಗವಹಿಸಿದ್ದರು.

ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ರವೀಂದ್ರ ಎಂ. ಜೋಶಿ ಅವರು ಸ್ವಾಗತಿಸಿದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News