ಮಂಗಳೂರು: ಅನೈತಿಕ ಪೊಲೀಸ್‌ಗಿರಿ ವಿರುದ್ಧ ಎಸ್‌ಡಿಪಿಐ ಪ್ರತಿಭಟನೆ
ಮಂಗಳೂರು: ದ.ಕ ಜಿಲ್ಲೆಯಲ್ಲಿ ತೀವ್ರಗೊಂಡಿರುವ ಸಂಘಪರಿವಾರದ ಅನೈತಿಕ ಪೊಲೀಸ್‌ಗಿರಿ ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಬಳಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು.
ಅನೈತಿಕ ಪೊಲೀಸ್‌ಗಿರಿ ನಡೆಸುತ್ತಿರುವವರ ವಿರುದ್ಧ ಸರಕಾರ ಹಾಗೂ ಪೊಲೀಸ್ ಇಲಾಖೆ ಸೂಕ್ತ ಕ್ರಮಕೈಗೊಳ್ಳುವಂತೆ ಒತ್ತಾಯಿಸಿದರು.
ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅನ್ವರ್ ಸಾದಾತ್ ಬಜತ್ತೂರು ಮಾತನಾಡಿ ರಾಜ್ಯದಲ್ಲಿ ಸರಕಾರ ಬದಲಾಗಿದ್ದರೂ, ಸಂಘ ಪರಿವಾರದ ದುಷ್ಟ ಶಕ್ತಿಗಳ ಅನೈತಿಕ ಪೊಲೀಸ್‌ಗಿರಿ ನಿಂತಿಲ್ಲ. ಕಾಂಗ್ರೆಸ್ ಸರಕಾರಕ್ಕೆ ಅನೈತಿಕ ಪೊಲೀಸ್‌ಗಿರಿಯನ್ನು ನಿಲ್ಲಿಸಲು ಸಾಧ್ಯವಾಗಿಲ್ಲ. ಸರಕಾರಕ್ಕೆ ದಮ್ ತಾಕತ್ತಿದ್ದರೆ ಅನೈತಿಕ ಪೊಲೀಸ್‌ಗಿರಿ ನಡೆಸುವ , ಅರಾಜಕತೆ ಸೃಷ್ಟಿಸುವ ಸಂಘ ಪರಿವಾರದ ದುಷ್ಟರನ್ನು ಜೈಲಿಗಟ್ಟಲಿ ಎಂದು ಆಗ್ರಹಿಸಿದರು.
ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮುಹಮ್ಮದ್ ತುಂಬೆ ಪ್ರಮುಖ ಭಾಷಣ ಮಾಡಿದರು.
ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ , ಎಸ್‌ಡಿಪಿಐ ಜಿಲ್ಲಾ ಉಪಾಧ್ಯಕ್ಷೆ ಮಿಶ್ರಿಯಾ ಕಣ್ಣೂರು ಮಾತನಾಡಿದರು. ಕಾರ್ಯದರ್ಶಿ ಸುಹೈಲ್ ಖಾನ್,ಮುಖಂಡರಾದ ಯೂಸುಫ್ ಆಲಡ್ಕ, ನಶ್ರಿಯಾ ಬೆಳ್ಳಾರೆ ಮತ್ತಿತರು ಉಪಸ್ಥಿತರಿದ್ದರು.