ಮಂಗಳೂರು: ರಾಜ್ಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ ‘ಶೆಫರ್ಡ್ಸ್ ಇಂಟರ್‌ನ್ಯಾಶನಲ್ ಅಕಾಡೆಮಿ’ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Update: 2023-09-11 09:29 GMT

ಮಂಗಳೂರು: ಅತ್ತಾವರದ ಶೆಫರ್ಡ್ಸ್ ಇಂಟರ್‌ನ್ಯಾಶನಲ್ ಅಕಾಡೆಮಿಯ ವಿದ್ಯಾರ್ಥಿಗಳು ಕರಾಟೆ ಸ್ಪರ್ಧೆಯಲ್ಲಿ ಚಿನ್ನ, ಬೆಳ್ಳಿ ಮತ್ತು ಕಂಚಿನ ಪದಕಗಳನ್ನು ಗೆದ್ದಿದ್ದಾರೆ.

ಮೂಡುಬಿದಿರೆಯ ಸಮಾಜ ಮಂದಿರದ ಸ್ವಾಮಿಸ್ ಸ್ಟ್ರೆಂಥ್ ಟ್ರೈನಿಂಗ್ ಸೆಂಟರ್‌ನಲ್ಲಿ ಸೆಪ್ಟೆಂಬರ್ 9 ರಂದು ಶೋರಿನ್ ರ್‍ಯೂ ಕರಾಟೆ ಅಸೋಸಿಯೇಷನ್ ಆಯೋಜಿಸಿದ್ದ 2023ನೇ ಸಾಲಿನ ರಾಜ್ಯ ಮಟ್ಟದ ಓಪನ್ ಕರಾಟೆ ಚಾಂಪಿಯನ್‌ಶಿಪ್ 2023ರಲ್ಲಿ ಶೆಫರ್ಡ್ಸ್ ಇಂಟರ್‌ನ್ಯಾಶನಲ್ ಅಕಾಡೆಮಿಯ 40 ವಿದ್ಯಾರ್ಥಿಗಳು ಭಾಗವಹಿಸಿದ್ದರು.


ಕಟಾ ಮತ್ತು ಕುಮಿಟೆ ವಿಭಾಗಗಳಲ್ಲಿ ಭಾಗವಹಿಸಿ ಐದು ವಿದ್ಯಾರ್ಥಿಗಳು ಚಿನ್ನ, ಐವರು ಬೆಳ್ಳಿ ಮತ್ತು 19 ವಿದ್ಯಾರ್ಥಿಗಳು ಕಂಚಿನ ಪದಕಗಳನ್ನು ಗೆದ್ದಿದ್ದಾರೆ. ಅಕಾಡೆಮಿಯ ಕರಾಟೆ ತಂಡ ಚಾಂಪಿಯನ್‌ಶಿಪ್‌ ನಲ್ಲಿ 2ನೇ ರನ್ನರ್ ಅಪ್ ಟ್ರೋಫಿಯನ್ನೂ ಗೆದ್ದುಕೊಂಡಿದೆ ಎಂದು ಶೆಫರ್ಡ್ಸ್ ಅಕಾಡೆಮಿಯ ಆಡಳಿತ ಮಂಡಳಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.


ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿರುವ ಶೆಫರ್ಡ್ಸ್ ಆಡಳಿತ ಮಂಡಳಿ, ಅಕಾಡೆಮಿಯ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆಯ ಹಿಂದೆ ಶ್ರಮಿಸಿದ ಪ್ರಾಂಶುಪಾಲರು, ಅಧ್ಯಾಪಕರು, ಪೋಷಕರು ಮತ್ತು ತರಬೇತುದಾರರಿಗೆ ಧನ್ಯವಾದಗಳನ್ನು ಸಲ್ಲಿಸಿದೆ.





 


 


Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News