ಮಂಗಳೂರು: ಸಂತ ಜೆರೋಸಾ ಶಾಲಾ ವಿವಾದ; ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ತನಿಖಾಧಿಕಾರಿ ಆಕಾಶ್

Update: 2024-02-20 14:58 GMT

ಮಂಗಳೂರು: ಸಂತ ಜೆರೋಸಾ ಆಂಗ್ಲಮಾಧ್ಯಮ ಶಾಲೆಯ ಶಿಕ್ಷಕಿಯ ಮೇಲಿನ ಆರೋಪ ಮತ್ತು ಆನಂತರ ನಡೆದಿರುವ ಘಟನೆಗಳಿಗೆ ಸಂಬಂಧಿಸಿ ಸರಕಾರದಿಂದ ತನಿಖಾಧಿಕಾರಿಯಾಗಿ ನೇಮಕಗೊಂಡಿರುವ ಶಾಲಾ ಶಿಕ್ಷಣ ಇಲಾಖೆ ಕಲಬುರಗಿ ವಿಭಾಗದ ಅಪರ ಆಯುಕ್ತ ಡಾ.ಆಕಾಶ್ ಶಂಕರ್ ಅವರು ಮಂಗಳವಾರ ತನಿಖೆ ಮುಂದುವರಿಸಿ ಶಾಲೆಯ ವಿದ್ಯಾರ್ಥಿಗಳಿಂದ ಮಾಹಿತಿ ಕಲೆ ಹಾಕಿದ್ದಾರೆ.

ಲಿಖಿತ ಹಾಗೂ ವಿಡಿಯೋ ರೆಕಾರ್ಡಿಂಗ್ ಮೂಲಕ ವಿದ್ಯಾರ್ಥಿಗಳ ಹೇಳಿಕೆಗಳನ್ನು ದಾಖಲಿಸಲಾಗಿದೆ.

ವಿದ್ಯಾರ್ಥಿಗಳು ಶಿಕ್ಷಕಿ ಸಿಸ್ಟರ್ ಪ್ರಭಾ ಅವರ ಪಾಠದ ವೇಳೆ ಆಡಿರುವ ಮಾತುಗಳನ್ನು ಹೇಳಿದ್ದಾರೆ. ಶಾಲೆಯಲ್ಲಿರುವಾಗ ಶಿಕ್ಷಕಿ ಏನೆಲ್ಲಾ ಹೇಳಿದ್ದರು ಎಂದು ತನಿಖಾಧಿಕಾರಿ ವಿದ್ಯಾರ್ಥಿನಿಯರನ್ನು ಪ್ರಶ್ನಿಸಿ, ಹೇಳಿಕೆ ಪಡೆದುಕೊಂಡಿದ್ದಾರೆ.

ಜೆರೋಸಾ ಶಾಲಾ ಶಿಕ್ಷಕಿಯ ವಿರುದ್ಧ ದೂರು ನೀಡಿದ್ದ ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಎಚ್.ಕೆ ಪುರುಷೋತ್ತಮ್ ಅವರಿಗೆ ತನಿಖೆಗೆ ಹಾಜರಾಗುವಂತೆ ತನಿಖಾಧಿಕಾರಿ ನೋಟಿಸ್ ನೀಡಿದ್ದರು. ಅದರಂತೆ ಹಾಜರಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಶಿಕ್ಷಕಿಯ ಬಗ್ಗೆ ನೀಡಿರುವ ಮಾಹಿತಿಯನ್ನು ತನಿಖಾಧಿಕಾರಿ ಮುಂದೆ ಹೇಳಿದ್ದೇವೆ. ನ್ಯಾಯ ನಿಷ್ಠೆಯಿಂದ ಅವರು ತನಿಖೆ ಮಾಡಿದ್ದಾರೆ ಎಂದು ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News