ಮಂಗಳೂರು: ತಲೆಮರೆಸಿಕೊಂಡಿದ್ದ ಆರೋಪಿ ಸೆರೆ
Update: 2023-10-23 15:21 GMT
ಮಂಗಳೂರು, ಅ.23: ಕಳೆದ ಆರು ವರ್ಷದಿಂದ ಪೊಲೀಸರಿಗೆ ಸಿಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಕೊಣಾಜೆ ಪೊಲೀಸರು ಬಂಧಿಸಿದ್ದಾರೆ.
ಆಲಿಮುನ್ನ ಯಾನೆ ಮುನ್ನ ಯಾನೆ ಹನೀಫ್ ಬಂಧಿತ ಆರೋಪಿಯಾಗಿದ್ದಾನೆ. 2014ರಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಈತ ಜಾಮೀನು ಪಡೆದ ಬಳಿಕ ತಲೆಮರೆಸಿಕೊಂಡಿದ್ದ. ಸೋಮವಾರ ಈತನ ಇರುವಿಕೆಯ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬಂಧಿಸಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿಯ ವಿರುದ್ಧ ಈ ಹಿಂದೆ ಬಂದರ್, ಪುತ್ತೂರು, ಬರ್ಕೆ, ವಿಟ್ಲ, ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.