ಮಂಗಳೂರು: ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ

Update: 2023-11-10 13:01 GMT

ಮಂಗಳೂರು: ತೊಕ್ಕೊಟ್ಟು ಒಳಪೇಟೆಯ ಭಟ್ರಗುಡ್ಡ ಎಂಬಲ್ಲಿ ನಿಷೇಧಿತ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಉಳ್ಳಾಲ ಅಳೇಕಲದ ಇರ್ಷಾದ್ (28) ಬಂಧಿತ ಆರೋಪಿಯಾಗಿದ್ದು, ಈತನಿಂದ 12 ಗ್ರಾಂ ಎಂಡಿಎಂಎ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 70 ಸಾವಿರ ರೂ. ಎಂದು ಅಂದಾಜಿಸಲಾಗಿದೆ.

ಆರೋಪಿಯು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಎಂಡಿಎಂಎ ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಮಂಗಳೂರು ಸಿಸಿಬಿ ಘಟಕದ ಎಸಿಪಿ ಪಿ.ಎ.ಹೆಗಡೆ ನೇತೃತ್ವದ ತಂಡವು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News