ಮಂಗಳೂರು: ಇಬ್ಬರು ವೃದ್ಧೆಯರು ಆತ್ಮಹತ್ಯೆ

Update: 2023-10-03 13:45 GMT

ಮಂಗಳೂರು, ಅ.3: ನಗರದ ಕದ್ರಿ ಕಂಬಳದ ಚಂದ್ರಿಕಾ ಬಡಾವಣೆಯಲ್ಲಿ ವಾಸವಾಗಿದ್ದ ಲತಾ ಭಂಡಾರಿ (70) ಮತ್ತು ಸುಂದರಿ ಶೆಟ್ಟಿ (80) ಎಂಬ ಸಹೋದರಿಯರು ಮಂಗಳವಾರ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

78ರ ಹರೆಯದ ಜಗನ್ನಾಥ್ ಭಂಡಾರಿ ಮತ್ತವರ ಪತ್ನಿ ಲತಾ ಭಂಡಾರಿ ಹಾಗೂ ಲತಾ ಭಂಡಾರಿಯ ಅಕ್ಕ ಸುಂದರಿ ಶೆಟ್ಟಿ ಎಂಬವರು ಈ ಮನೆಯಲ್ಲಿ ವಾಸಿಸುತ್ತಿದ್ದರು. ಎಂದಿನಂತೆ ಜಗನ್ನಾಥ್ ಭಂಡಾರಿ ಕೆಲಸಕ್ಕೆ ಹೋದವರು ಸಂಜೆ 4:30ರ ವೇಳೆಗೆ ಮನೆಗೆ ತೆರಳಿದಾಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಜಗನ್ನಾಥ ಭಂಡಾರಿ ಮನೆಗೆ ತೆರಳಿದಾಗ ಮನೆಯ ಬಾಗಿಲು ಮುಚ್ಚಲ್ಪಟ್ಟಿತ್ತು. ಕಿಟಕಿಯಿಂದ ನೋಡಿದಾಗ ಸಹೋದರಿಯರು ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ ಎನ್ನಲಾಗಿದೆ. ಕೌಟುಂಬಿಕ ವಿಚಾರದಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಪೊಲೀಸರು ಶಂಕಿಸಿದ್ದು, ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News