ಮಂಗಳೂರು: ವಿಶ್ವಕರ್ಮ ಜಯಂತಿ ಆಚರಣೆ

Update: 2023-09-17 12:53 GMT

ಮಂಗಳೂರು, ಸೆ.17: ದ.ಕ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಂಗಳೂರಿನ ಶ್ರೀ ಕಾಳಿಕಾಂಬ ವಿನಾಯಕ ದೇವಸ್ಥಾನದ ಸಹಯೋಗದಲ್ಲಿ ರವಿವಾರ ನಗರದ ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿ ಆಚರಿಸಲಾಯಿತು.

ಕೇಂದ್ರದ ಮೀನುಗಾರಿಕೆ, ಪಶುಸಂಗೋಪನೆ, ಹೈನುಗಾರಿಕೆ ಸಚಿವ ಪರಷೋತ್ತಮ್ ರೂಪಾಲಾ ಕಾರ್ಯಕ್ರಮ ಉದ್ಘಾಟಿ ಸಿದರು. ಬಳಿಕ ಮಾತನಾಡಿದ ಅವರು ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ವಿಶ್ವಕರ್ಮ ಸಮುದಾಯವನ್ನು ಕೇಂದ್ರ ಸರಕಾರದೊಂದಿಗೆ ಜೋಡಿಸುವ ‘ಪಿಎಂ ವಿಶ್ವಕರ್ಮ’ ಯೋಜನೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿಶ್ವಕರ್ಮ ಜಯಂತಿಯಂದೇ ಚಾಲನೆ ನೀಡುತ್ತಿರುವುದು ಹೆಮ್ಮೆಯ ವಿಚಾರ. ಮಂಗಳೂರಿನಲ್ಲಿ ಈ ಯೋಜನೆಯನ್ನು ತನಗೆ ಉದ್ಘಾಟಿಸುವ ಅವಕಾಶ ಸಿಕ್ಕಿದೆ ಎಂದರು.

ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ.ಭರತ್ ಶೆಟ್ಟಿ, ಮೇಯರ್ ಸುಧೀರ್ ಶೆಟ್ಟಿ, ಮಣ್ಣಗುಡ್ಡೆಯ ಕಾರ್ಪೊರೇಟರ್ ಸಂಧ್ಯಾ ಮೋಹನ್, ಶ್ರೀ ಕಾಳಿಕಾಂಬಾ ವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರ ಕೆ. ಕೇಶವ ಆಚಾರ್ಯ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ., ಕಾಳಿಕಾಂಬಾ ಸೇವಾ ಸಮಿತಿಯ ಕಾರ್ಯದರ್ಶಿ ಜಗದೀಶ್ ಸಿದ್ದಕಟ್ಟೆ, ಆಡಳಿತ ಮಂಡಳಿಯ ಸದಸ್ಯರಾದ ಟಿ.ಜಯಕರ್ ಆಚಾರ್ಯ ತಲೆಬೈಲ್, ಕೆ.ಕೆ. ವಿಟ್ಠಲ್ ಉಪಸ್ಥಿತರಿದ್ದರು.

ಪೂರ್ಣಪ್ರಜ್ಞಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಜಿ. ಯಶವಂತ ಆಚಾರ್ಯ ಶ್ರೀ ವಿಶ್ವಕರ್ಮ ಜಯಂತಿ ಸಂದೇಶ ನೀಡಿ ದರು. ಸುಜೀರ್ ವಿನೋದ್ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News