ಮಂಗಳೂರು: ವಿದೇಶದಿಂದ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿ ಸೆರೆ

Update: 2024-11-01 17:02 GMT

ಮಂಗಳೂರು: ಡ್ರಗ್ಸ್ ಫ್ರಿ ಮಂಗಳೂರು ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಕಾರ್ಯಾಚರಣೆ ಯಲ್ಲಿ ವಿದೇಶದಿಂದ ನಗರಕ್ಕೆ ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿ ಆತನಿಂದ 30 ಲಕ್ಷ ರೂ. ಮೌಲ್ಯದ ಹೈಡ್ರೋವೀಡ್ ಗಾಂಜಾ ಹಾಗೂ 2.5 ಕೆಜಿ ಗಾಂಜಾ ಮತ್ತಿತರ ಸೊತ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಪುತ್ತೂರಿನ ಹಾರಾಡಿಯ ಪ್ರಸಕ್ತ ತೊಕ್ಕೊಟ್ಟು ಚೊಂಬುಗುಡ್ಡೆಯ ಮುಹಮ್ಮದ್ ಹಫೀಝ್ (23) ಎಂಬಾತನನ್ನು ಬಂಧಿಸಿ ಆತನಿಂದ 30 ಲಕ್ಷ ರೂ. ಮೌಲ್ಯದ 300 ಗ್ರಾಂ ಹೈಡ್ರೋವೀಡ್ ಗಾಂಜಾ ಹಾಗೂ 75,000 ರೂ. ಮೌಲ್ಯದ 2.5 ಕೆಜಿ ಗಾಂಜಾ, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪಕವನ್ನು ವಶಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಬಂದರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಹೈಡ್ರೋವೀಡ್ ಗಾಂಜಾವನ್ನು ವಿದೇಶದ ಥೈಲ್ಯಾಂಡ್‌ನಿಂದ ತಂದಿರುವ ಬಗ್ಗೆ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿರುತ್ತದೆ. ಈ ಅಕ್ರಮ ಮಾದಕ ವಸ್ತು ಮಾರಾಟ ದಂಧೆಯಲ್ಲಿ ಹಲವಾರು ಮಂದಿ ಭಾಗಿಯಾಗಿದ್ದು, ಈ ನಿಟ್ಟಿನಲ್ಲಿ ಪತ್ತೆ ಕಾರ್ಯಮುಂದುವರಿಯಲಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಿಸಿಬಿ ಘಟಕದ ಎಸಿಪಿ ಮನೋಜ್ ಕುಮಾರ್ ನಾಯ್ಕ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಹೆಚ್.ಎಂ, ಎಸ್ಸೈ ಶರಣಪ್ಪಭಂಡಾರಿ ಮತ್ತು ಸಿಸಿಬಿ ಘಟಕದ ಸಿಬ್ಬಂದಿ ವರ್ಗವು ಪಾಲ್ಗೊಂಡಿತ್ತು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News