ಮಂಗಳೂರು: ವಾಹನಗಳ ಬ್ಯಾಟರಿ ಕಳ್ಳತನ ಪ್ರಕರಣದ ಆರೋಪಿಯ ಬಂಧನ

Update: 2024-02-16 18:06 GMT

ಮಂಗಳೂರು: ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿರುವ ವಾಹನಗಳ ಬ್ಯಾಟರಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿ ಒಟ್ಟು 3.90 ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಉಳ್ಳಾಲ ಸೋಮೇಶ್ವರ ಕಜೆಯ ರಿಯಾಝ್ (30) ಬಂಧಿತ ಆರೋಪಿ.

2024, ಜ.29ರಂದು ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಲಾರಿಗಳ ಬ್ಯಾಟರಿಗಳು ಕಳ್ಳತನವಾಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಕೊಣಾಜೆ ಠಾಣಾ ಪೊಲೀಸರು ನಾಟೆಕಲ್ ಬಳಿ ಫೆ.14ರಂದು ಆರೋಪಿ ರಿಯಾಝ್ ನನ್ನು ಬಂಧಿಸಿ ಆತನಿಂದ ಬ್ಯಾಟರಿಗಳನ್ನು ಮತ್ತು ಕೃತ್ಯಕ್ಕೆ ಬಳಿಸಿದ ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್ ಮಾರ್ಗದರ್ಶನದಂತೆ ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಸಿದ್ದಾರ್ಥ ಗೋಯಲ್ ಮತ್ತು ಅಪರಾಧ ಸಂಚಾರ ವಿಭಾಗದ ಡಿಸಿಪಿ ದಿನೇಶ್‌ಕುಮಾರ್ ಮತ್ತು ಮಂಗಳೂರು ದಕ್ಷಿಣ ವಿಭಾಗದ ಎಸಿಪಿ ಧನ್ಯ .ಎನ್ ನಾಯಕ್ ನಿರ್ದೇಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಕೊಣಾಜೆ ಪೊಲೀಸ್ ಠಾಣೆಯ ನಿರೀಕ್ಷಕ ರವೀಂದ್ರ ಸಿ.ಎಂ, ಪಿಎಸ್‌ಐಗಳಾದ ನಾಗರಾಜ .ಎಸ್, ಪುನೀತ್ ಗಾಂವ್‌ಕರ್, ಅಶೋಕ್, ಯಲ್ಲಾಲಿಂಗ , ಎಎಸ್‌ಐ ಸಂಜೀವ್, ಸಿಬ್ಬಂದಿ ರೇಷ್ಮಾ, ಸಂತೋಷ್, ಕೆ.ಸಿ. ಬಸವನಗೌಡ, ಸುರೇಶ್ ತಳವಾರ್ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Ismail

contributor

Byline - ವಾರ್ತಾಭಾರತಿ

contributor

Similar News