ಮಂಗಳೂರು| ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ: ಐವನ್ ಡಿಸೋಜ ಸಹಿತ ಹಲವರು ವಶಕ್ಕೆ

Update: 2024-12-21 11:21 GMT

ಮಂಗಳೂರು, ಡಿ.21: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅಶ್ಲೀಲ ಪದ ಬಳಕೆ ಮಾಡಿದ್ದನ್ನು ಖಂಡಿಸಿ ಶನಿವಾರ ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ದ.ಕ.ಜಿಲ್ಲಾ ಸಮಿತಿಯು ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿತು.

ಈ ಸಂದರ್ಭ ಪೊಲೀಸರು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ, ಎನ್‌ಎಸ್‌ಯುಐ ದ.ಕ.ಜಿಲ್ಲಾಧ್ಯಕ್ಷ ಸುಹಾನ್ ಆಳ್ವ ಸಹಿತ ಹಲವು ಮಂದಿಯನ್ನು ವಶಕ್ಕೆ ಪಡೆದುಕೊಂಡರು.

ನಗರದ ಕೋಡಿಯಾಲ್‌ ಬೈಲ್‌ನಲ್ಲಿರುವ ಬಿಜೆಪಿ ಕಚೇರಿಯ ಮುಂದೆ ಪ್ರತಿಭಟನೆ ನಡೆಸಿದ ಎನ್‌ಎಸ್‌ಯುಐ ಕಾರ್ಯಕರ್ತರು ಬಳಿಕ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಮುಂದಾಯಿತು. ತಕ್ಷಣ ಪೊಲೀಸರು ಮುಖಂಡರ ಸಹಿತ ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.








Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News