ಮಂಗಳೂರು | ದೇಶ ವಿರೋಧಿ ಹೇಳಿಕೆ ಆರೋಪ: ಹೈಲ್ಯಾಂಡ್ ಆಸ್ಪತ್ರೆಯ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲು
ಸಾಂದರ್ಭಿಕ ಚಿತ್ರ
ಮಂಗಳೂರು: ನಗರದ ಹೈಲ್ಯಾಂಡ್ ಆಸ್ಪತ್ರೆಯ ಡಯಟೀಷಿಯನ್‌ವೊಬ್ಬರು ಸಾಮಾಜಿಕ ಜಾಲತಾಣದಲ್ಲಿ ದೇಶ ವಿರೋಧಿ ಹೇಳಿಕೆಯನ್ನು ಪೋಸ್ಟ್ ಮಾಡಿದ ಆರೋಪ ಸಂಬಂಧ ಸುಮೊಟೋ ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ಪೊಲೀಸರು ಈ ಸಿಬ್ಬಂದಿಯನ್ನು ವಿಚಾರಣೆಗೊಳಪಡಿಸಿ ಮೊಬೈಲ್ ಅನ್ನು ವಶಪಡಿಸಿಕೊಂಡಿದ್ದಾರೆ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗ್ರವಾಲ್ ತಿಳಿಸಿದ್ದಾರೆ.
ಕರ್ತವ್ಯದಿಂದ ವಜಾಗೊಳಿಸಿದ ಹೈಲ್ಯಾಂಡ್ ಆಸ್ಪತ್ರೆ:
ದೇಶ ವಿರೋಧಿ ಹೇಳಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಕುರಿತಂತೆ ಡಯಟೀಷಿಯನ್ ಅಫೀಫ ಫಾತಿಮಾರನ್ನು ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆ ಕರ್ತವ್ಯದಿಂದ ವಜಾಗೊಳಿಸಿದೆ ಎಂದು ತಿಳಿದು ಬಂದಿದೆ.
ಆಸ್ಪತ್ರೆಯ ಡಯಟೀಷಿಯನ್‌ನ ಪೋಸ್ಟ್‌ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ ಆಕೆಯನ್ನು ಹೈಲ್ಯಾಂಡ್ ಆಸ್ಪತ್ರೆ ಆಡಳಿತ ಮಂಡಳಿ ಹುದ್ದೆಯಿಂದ ವಜಾಗೊಳಿಸಿದೆ. ನಂತರ ಆಸ್ಪತ್ರೆಯ ಎಚ್‌ಆರ್ ವಿಭಾಗದವರು ಡಯಟೀಷಿಯನ್ ವಿರುದ್ಧ ಪಾಂಡೇಶ್ವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.