ಮಂಗಳೂರು: ಇಸ್ಪೀಟ್ ಅಡ್ಡೆಗೆ ಸಿಸಿಬಿ ಪೊಲೀಸರಿಂದ ದಾಳಿ; 29 ಮಂದಿ ಸೆರೆ

Update: 2024-01-21 15:09 GMT

ಮಂಗಳೂರು: ಸಿಸಿಬಿ ಪೊಲೀಸರು ಇಸ್ಪೀಟ್ ಅಡ್ಡೆಯೊಂದಕ್ಕೆ ದಾಳಿ ನಡೆಸಿ ಜೂಜಾಟವಾಡುತ್ತಿದ್ದ 29 ಮಂದಿಯನ್ನು ಬಂಧಿಸಿ, ಒಟ್ಟು 1,75,450 ರೂ. ವಶಪಡಿಸಿಕೊಂಡಿದ್ದಾರೆ.

ಮಂಗಳೂರು ತಾಲೂಕು ಕಿಲ್ಪಾಡಿ ಗ್ರಾಮದ ಬಂಡಸಾಲೆ ಎಂಬಲ್ಲಿ ಮನೆಯೊಂದರಲ್ಲಿ ಜೂಜಾಟ ಆಡುತ್ತಿದ್ದಾರೆಂದು ಬಂದ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ಪೊಲೀಸರು ಬೆಳಗಿನ ಜಾವ ದಾಳಿ ನಡೆಸಿದ್ದರು.

ಈಜೂಜಾಟವನ್ನು ನಿತ್ಯಾನಂದ, ವಿಲ್ಫ್ರೇಡ್ ಮತ್ತು ರೆಹಮಾನ್ ಎಂಬವರು ಆಡಿಸುತ್ತಿದ್ದರೆಂದು ಆರೋಪಿಸಲಾಗಿದೆ. ನಿತ್ಯಾನಂದ ಮತ್ತು ರೆಹಮಾನ್ ತಲೆ ಮರೆಸಿಕೊಂಡಿರುವುದಾಗಿ ಪೊಲೀಸರ ಪ್ರಕಟನೆ ತಿಳಿಸಿದೆ.

ಈ ಪತ್ತೆ ಕಾರ್ಯವನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಅನುಪಮ್ ಅಗರ್ವಾಲ್ ಮಾರ್ಗದರ್ಶನದಂತೆ ಕಾನೂನು ಮತ್ತು ಸುವ್ಯವಸ್ಥೆಯ ಡಿಸಿಪಿ ಸಿದ್ದಾರ್ಥ ಗೋಯಲ್ ಐಪಿಎಸ್ ಮತ್ತು ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಅವರ ನಿರ್ದೇಶನದಂತೆ ಮಂಗಳೂರು ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಅವರ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಸಿಬಿ ಘಟಕದ ಅಧಿಕಾರಿ, ಸಿಬ್ಬಂದಿ ಪಾಲ್ಗೊಂಡಿದ್ದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News