ಮಂಗಳೂರು | ಈಡಿ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನೆ

Update: 2025-04-16 15:42 IST
ಮಂಗಳೂರು | ಈಡಿ ವಿರುದ್ಧ ಕಾಂಗ್ರೆಸ್‌ನಿಂದ ಪ್ರತಿಭಟನೆ
  • whatsapp icon

ಮಂಗಳೂರು : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ವಿರುದ್ಧ ಹಣದ ಅಕ್ರಮ ವರ್ಗಾವಣೆಯ ಸುಳ್ಳಾರೋಪ ಹೊರಿಸಿ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯ (ಈಡಿ)ದ ಕ್ರಮವನ್ನು ಖಂಡಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಯೆಯ್ಯಾಡಿಯ ಈಡಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಯಿತು.

ಕೇಂದ್ರ ಸರಕಾರವು ಜಾರಿ ನಿರ್ದೇಶನಾಲಯ (ಈಡಿ) ಸಂಸ್ಥೆಯನ್ನು ದುರುಪಯೋಗ ಪಡಿಸಿಕೊಂಡು ವಿರೋಧ ಪಕ್ಷದ ನಾಯಕರ ವಿರುದ್ಧ ಪ್ರಯೋಗಿಸುತ್ತಿದೆ. ಈ ಮೂಲಕ ವಿಪಕ್ಷಗಳನ್ನು ದುರ್ಬಲಗೊಳಿಸಲು ಮೋದಿ ಸರಕಾರ ಯತ್ನಿಸುತ್ತಿದೆ ಎಂದು ಮಾಜಿ ಸಚಿವ ರಮಾನಾಥ ರೈ ಆರೋಪಿಸಿದರು.

ಈಡಿ ದಾಳಿಗೆ ಒಳಗಾದವರು ಬಿಜೆಪಿ ಸೇರಿದರೆ ಅವರು ಕ್ಲೀನ್ ಆಗುತ್ತಾರೆ. ಬಿಜೆಪಿ ಬಳಿ ಭ್ರಷ್ಟರನ್ನು ಕ್ಲೀನ್ ಮಾಡುವ ವಾಶಿಂಗ್ ಮಿಶನ್ ಇದೆ. ವಿಪಕ್ಷಗಳನ್ನು ಗುರಿಯಾಗಿಸಿ ಕೇಂದ್ರ ಸರಕಾರವು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿರುವ ವಿರುದ್ಧ ನಿರಂತರ ಹೋರಾಟ ನಡೆಯಲಿದೆ ಎಂದರು.

ಯೆಯ್ಯಾಡಿ ಈಡಿ ಕಚೇರಿಗೆ ಪ್ರತಿಭಟನಾ ನಿರತ ಕಾಂಗ್ರೆಸ್ಸಿಗರು ನುಗ್ಗಲು ಯತ್ನಿಸಿದಾಗ ಸ್ಥಳದಲ್ಲಿದ್ದ ಪೊಲೀಸರು ತಡೆದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್, ಮುಖಂಡರಾದ ಪ್ರಕಾಶ್ ಸಾಲಿಯಾನ್, ಭರತ್ ಮುಂಡೋಡಿ, ಶಶಿಧರ ಹೆಗ್ಡೆ, ಲಾರೆನ್ಸ್ ಡಿಸೋಜಾ, ಹರಿನಾಥ್, ಸುಧೀರ್ ಟಿ.ಕೆ., ಮನೋರಾಜ್ ಇನ್ನಿತರರು ಉಪಸ್ಥಿತರಿದ್ದರು. 

 

 

Tags:    

Writer - ವಾರ್ತಾಭಾರತಿ

contributor

Editor - Ashik

contributor

Byline - ವಾರ್ತಾಭಾರತಿ

contributor

Similar News