ಮಂಗಳೂರು: ಮಗುವಿನೊಂದಿಗೆ ತಾಯಿ ನಾಪತ್ತೆ

ಮಂಗಳೂರು, ಎ.14: ಮೂಲತಃ ಬೆಳಗಾವಿ ಜಿಲ್ಲೆಯ ಪ್ರಸಕ್ತ ನಗರದ ಎಮ್ಮೆಕೆರೆಯ ಅಪಾರ್ಟ್ ಮೆಂಟ್ ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದ ಪತಿಯ ಜೊತೆ ವಾಸವಾಗಿದ್ದ ಮಹಿಳೆಯೊಬ್ಬರು ತನ್ನ ಮೂರು ವರ್ಷ ಪ್ರಾಯದ ಮಗುವಿನೊಂದಿಗೆ ನಾಪತ್ತೆಯಾದ ಬಗ್ಗೆ ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಜಾತಾ ನಾಗಪ್ಪ ಗೋಡಿ ನಾಪತ್ತೆಯಾದಾಕೆ. ಈಕೆ 12 ವರ್ಷಗಳ ಹಿಂದೆ ನಾಗಪ್ಪರನ್ನು ಪ್ರೀತಿಸಿ ಮದುವೆಯಾಗಿದ್ದರು. ನಾಗಪ್ಪ ಎಮ್ಮೆಕೆರೆಯ ಅಪಾರ್ಟ್ ಮೆಂಟ್ ನಲ್ಲಿ ಹೌಸ್ ಕೀಪಿಂಗ್ ಮತ್ತು ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದು, 10 ತಿಂಗಳಿನಿಂದ ಸುಜಾತಾ ಈ ಅಪಾರ್ಟ್ ಮೆಂಟ್ನಲ್ಲಿ ವಾಸವಾಗಿದ್ದರು. ಈ ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಎ.6ರಂದು ನಾಗಪ್ಪ ಕೆಲಸದ ನಿಮಿತ್ತ ಹೊರ ಹೋಗಿದ್ದು, ಈ ಸಂದರ್ಭ ಸುಜಾತಾ ತನ್ನ ಕಿರಿಯ ಮಗ ನಿಖಿಲ್ ಕುಮಾರ್ ಜೊತೆ ನಾಪತ್ತೆಯಾಗಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.
30 ವರ್ಷ ಪ್ರಾಯದ ಸುಜಾತಾ 5.2 ಅಡಿ ಎತ್ತರವಿದ್ದು, ಎಣ್ಣೆಕಪ್ಪು ಮೈಬಣ್ಣ ಹೊಂದಿದ್ದಾರೆ. ಕನ್ನಡ, ಹಿಂದಿ, ಉರ್ದು ಭಾಷೆ ಮಾತನಾಡುತ್ತಾರೆ. ಇವರು ಕಂಡು ಬಂದಲ್ಲಿ ಪಾಂಡೇಶ್ವರ (0824-2220518)ಪೊಲೀಸರನ್ನು ಸಂಪರ್ಕಿಸಬಹುದು ಎಂದು ಪೊಲೀಸ್ ಪ್ರಕಟನೆ ತಿಳಿಸಿದೆ.