ಮಂಗಳೂರು: ಎಸ್‌ಸಿಡಿಸಿಸಿ ಬ್ಯಾಂಕ್‌ ನಲ್ಲಿ ಮೊಳಹಳ್ಳಿ ಶಿವರಾಯರ ಜನ್ಮದಿನಾಚರಣೆ

Update: 2024-08-04 08:48 GMT

ಮಂಗಳೂರು,ಆ.4:ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ರವಿವಾರ ಸಹಕಾರಿ ಪಿತಾಮಹ ದಿವಂಗತ ಮೊಳಹಳ್ಳಿ ಶಿವರಾವ್ ಅವರ 144ನೇ ಜನ್ಮದಿನವನ್ನು ಆಚರಿಸಲಾಯಿತು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್‌ನ ಸಂಯುಕ್ತ ಆಶ್ರಯದಲ್ಲಿ ನಡೆದ ಸಮಾರಂಭದಲ್ಲಿ ಮೊಳಹಳ್ಳಿ ಶಿವರಾಯರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು. ಬಳಿಕ ಸಹಕಾರಿ ಪ್ರತಿಜ್ಞೆ ಕೈಗೊಳ್ಳಲಾಯಿತು.

ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ, ಸಹಕಾರ ರತ್ನ ಡಾ.ಎಂ.ಎನ್.ರಾಜೆಂದ್ರ ಕುಮಾರ್ ಅವರು ‘ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊಳಹಳ್ಳಿ ಶಿವರಾಯರು ಸಹಕಾರಿ ರಂಗವನ್ನು ಗಟ್ಟಿಯಾಗಿ ಕಟ್ಟಿ ಬೆಳೆಸಿದ್ದಾರೆ. ಸ್ವಾತಂತ್ರ್ಯ ಪೂರ್ವದಲ್ಲಿ ಸಹಕಾರಿ ರಂಗದ ಬಗ್ಗೆ ಜನರಲ್ಲಿ ಅರಿವು ಮೂಡಿಸಿದ್ದ ಅವರ ಜೀವನ ಎಲ್ಲರಿಗೂ ಮಾದರಿಯಾಗಿದೆ. ಅವರ ಹೆಸರು ಚಿರಸ್ಥಾಯಿಯಾಗಿ ಉಳಿಯಲಿ ಎಂದರು.

ದ.ಕ.ಜಿಲ್ಲಾ ಸಹಕಾರಿ ಯೂನಿಯನ್ ಲಿಮಿಟೆಡ್‌ನ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ ಅವರು ಮೊಳಹಳ್ಳಿ ಶಿವರಾವ್ ಜಿಲ್ಲೆಯಲ್ಲಿ ಸಹಕಾರಿ ರಂಗಕ್ಕೆ ಭದ್ರವಾದ ಅಡಿಪಾಯ ಹಾಕಿಕೊಟ್ಟು ಬೆಳೆಸಿದ್ದರು ಎಂದರು.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೆ.ಪಿ.ಸುಚರಿತ ಶೆಟ್ಟಿ ಅವರು ಮಾತನಾಡಿ, ಸಹಕಾರಿ ರಂಗದಲ್ಲಿ ದಾಖಲಾರ್ಹ ಸಾಧನೆ ಮಾಡಿರುವ ಮೊಳಹಳ್ಳಿ ಶಿವರಾಯರ ಸಹಕಾರಿ ಪರಂಪರೆಯನ್ನು ಸಹಕಾರಿ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅದ್ಭುತವಾಗಿ ಮುನ್ನಡೆಸಿಕೊಂಡು ಬಂದಿದ್ದಾರೆ.ಅವರ ಶ್ರಮದಿಂದಾಗಿ ಅವಿಭಜಿತ ಜಿಲ್ಲೆಯ ಸಹಕಾರಿ ರಂಗ ಇವತ್ತು ದೇಶಕ್ಕೆ ಮಾದರಿಯಾಗಿ ಬೆಳೆದಿದೆ ಎಂದು ಅಭಿಪ್ರಾಯಪಟ್ಟರು.

ಸಮಾರಂಭದಲ್ಲಿ ಬ್ಯಾಂಕ್‌ ನ ಉಪಾಧ್ಯಕ್ಷ ವಿನಯ ಕುಮಾರ್ ಸೂರಿಂಜೆ, ನಿರ್ದೇಶಕರಾದ ಟಿ. ಜಿ ರಾಜಾರಾಮ್ ಭಟ್ ಭಾಸ್ಕರ್ ಎಸ್. ಕೋಟ್ಯಾನ್, ಶಶಿಕುಮಾರ್ ರೈ ಬಿ., ಎಸ್.ಬಿ. ಜಯರಾಮ ರೈ , ರಾಜು ಪೂಜಾರಿ, ಎಂ.ಮಹೇಶ್ ಹೆಗ್ಡೆ, ಮೋನಪ್ಪ ಶೆಟ್ಟಿ ಎಕ್ಕಾರು, ಕೆ. ಹರಿಶ್ಚಂದ್ರ, ಕೆ. ಜೈರಾಜ್ ಬಿ.ರೈ, ಸದಾಶಿವ ಉಳ್ಳಾಲ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗೋಪಾಲಕೃಷ್ಣ ಭಟ್ , ಜನತಾ ಬಜಾರ್ ಅಧ್ಯಕ್ಷ ಪುರುಷೋತ್ತಮ ಭಟ್, ವಿಶ್ವಕರ್ಮ ಸಹಕಾರ ಬ್ಯಾಂಕ್‌ ನ ಅಧ್ಯಕ್ಷ ಹರೀಶ್ ಆಚಾರ್, ಆತ್ಮಶಕ್ತಿ ವಿವಿದ್ದೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್,ಯೂನಿಯನ್ ಕಾರ್ಯದರ್ಶಿ ಎಸ್. ವಿ. ಹಿರೇಮಠ, ನಿರ್ದೇಶಕಿ ಕೆ.ಸಾವಿತ್ರಿ ರೈ ಉಪಸ್ಥಿತರಿದ್ದರು.


Delete Edit

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News