ಮಂಗಳೂರು: ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಆರೋಪಿ ಸೆರೆ

Update: 2023-11-12 11:44 GMT

ಮಂಗಳೂರು, ನ.12: ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮೂಲತಃ ಹರೇಕಳ ಗ್ರಾಮದ ಪ್ರಸ್ತುತ ಬಜಾಲ್ ಪಡ್ಪು ಎಂಬಲ್ಲಿ ವಾಸವಾಗಿರುವ ಹಸೈನಾರ್ ಯಾನೆ ಅಚ್ಚು(32) ಎಂದು ಗುರುತಿಸಲಾಗಿದೆ.

ಈತನಿಂದ 12 ಗ್ರಾಂ ತೂಕದ 60,000/-ಮೌಲ್ಯದ ಎಂಡಿಎಂಎ ಮಾದಕ ವಸ್ತು, 1 ಮೊಬೈಲ್ ಫೋನ್, 1 ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 70,500 ಆಗಬಹುದು ಎಂದು ಅಂದಾಜಿಸಲಾಗಿದೆ.

ನಗರದ ಪಡೀಲ್ ಪರಿಸರದಲ್ಲಿ ವ್ಯಕ್ತಿಯೊಬ್ಬ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ರವಿವಾರ ದಾಳಿ ನಡೆಸಿ ಬಂಧಿಸಿದ್ದಾರೆ.

ಆರೋಪಿಯ ವಿರುದ್ಧ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಪತ್ತೆ ಕಾರ್ಯ ಮುಂದುವರಿದಿದೆ. ಆರೋಪಿಯ ವಿರುದ್ಧ ಈ ಹಿಂದೆ ಕಂಕನಾಡಿ ನಗರ ಠಾಣೆಯಲ್ಲಿ ಕೊಲೆಯತ್ನ ಮತ್ತು ಹಲ್ಲೆ ಪ್ರಕರಣ ಹಾಗೂ ಪಾಂಡೇಶ್ವರ ಠಾಣೆಯಲ್ಲಿ ಹಲ್ಲೆ ಹೀಗೆ ಒಟ್ಟು 3 ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News