ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶ: ಅಡ್ಯಾರ್ ಕಣ್ಣೂರ್‌ ನಲ್ಲಿ ಜನಸಾಗರ

Update: 2025-04-18 17:03 IST
ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶ: ಅಡ್ಯಾರ್ ಕಣ್ಣೂರ್‌ ನಲ್ಲಿ ಜನಸಾಗರ
  • whatsapp icon

ಮಂಗಳೂರು, ಎ.18: ಕೇಂದ್ರ ಸರಕಾರದಿಂದ ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧ ಕರ್ನಾಟಕ ಉಲಮಾ ಒಕ್ಕೂಟದ ನೇತೃತ್ವದಲ್ಲಿ ಅಡ್ಯಾರ್ ಕಣ್ಣೂರಿನ ಶಾ ಗಾರ್ಡನ್‌ನಲ್ಲಿ ಆಯೋಜಿಸಲಾದ ಪ್ರತಿಭಟನಾ ಸಮಾವೇಶಕ್ಕೆ ವಿವಿಧ ಕಡೆಗಳಿಂದ ಜನಸಾಗರವೇ ಹರಿದು ಬಂದಿದೆ.


ಬಿಸಿಲ ಝಳದ ನಡುವೆಯೂ ಮಧ್ಯಾಹ್ನ 2 ಗಂಟೆಯಿಂದಲೇ ಅಡ್ಯಾರ್ ಕಣ್ಣೂರಿನತ್ತ ಜನರು ವಿವಿಧ ಕಡೆಗಳಿಂದ ಆಗಮಿಸಲಾರಂಭಿಸಿದ್ದು, ಹೆದ್ದಾರಿಯುದ್ದಕ್ಕೂ ವಾಹನ ಸಂಚಾರ ನಿಧಾನಗತಿಯಲ್ಲಿ ಸಂಚರಿ ಸುತ್ತಿತ್ತು. ಇತ್ತ ನಗರದ ವಿವಿಧ ಕಡೆಗಳಲ್ಲಿ ಮಧ್ಯಾಹ್ನದಿಂದ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದು, ಶುಭ ಶುಕ್ರವಾರವೂ ಆಗಿದ್ದರಿಂದ ಮಧ್ಯಾಹ್ನದ ವೇಳೆ ನಗರದೆಲ್ಲೆಡೆ ವಾಹನಗಳ ಸಂಚಾರವೂ ಬಹುತೇಕವಾಗಿ ವಿರಳವಾಗಿತ್ತು. ನಗರ ಹಾಗೂ ಅಡ್ಯಾರ್ ಸುತ್ತಮುತ್ತಲಿನ ಪ್ರದೇಶಗಳ ಜಂಕ್ಷನ್, ಕ್ರಾಸಿಂಗ್ ಪ್ರದೇಶಗಳಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ವಾಹನಗಳ ಗಸ್ತಿನ ಜತೆಗೆ ಅಲ್ಲಲ್ಲಿ ಪೊಲೀಸ್ ವಾಹನಗಳನ್ನು ನಿಲ್ಲಿಸಲಾಗಿದೆ.


ಅಚ್ಚುಕಟ್ಟಿನ ವ್ಯವಸ್ಥೆ

ಪ್ರತಿಭಟನಾ ಸ್ಥಳದಲ್ಲಿ ಸ್ವಯಂ ಸೇವಕರ ಮೂಲಕ ಶಿಸ್ತುಬದ್ಧ ವ್ಯವಸ್ಥೆಯನ್ನು ಮಾಡಲಾಗಿದೆ. ಕುಡಿಯು ನೀರಿನ ಖಾಲಿ ಬಾಟಲಿಗಳನ್ನು ಆಗಿಂದಾಗ್ಗೆ ಸ್ವಯಂ ಸೇವಕರು ತೆರವುಗೊಳಿಸುವ ಕಾರ್ಯವನ್ನು ನಡೆಸುತ್ತಿದ್ದಾರೆ.


ಆಝಾದಿ ಘೋಷಣೆ : ಡ್ರೋನ್ ಕಣ್ಗಾವಲು

ಪ್ರತಿಭಟನಾ ಸ್ಥಳದಲ್ಲಿ ಸೇರಿದ್ದವರು ಆಝಾದಿ ಘೋಷಣೆಗಳನ್ನು ಕೂಗುತ್ತಾ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಮೈದಾನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಪೊಲೀಸರ ಜತೆಗೆ ಸ್ವಯಂ ಸೇವಕರು ಕೂಡಾ ಮೈದಾನದ ಸುತ್ತಮುತ್ತ ಸುಗಮ ಸಂಚಾರ ವ್ಯವಸ್ಥೆ ನಿರ್ವಹಣೆಗೆ ಸಹಕರಿಸುವುದು ಕಂಡು ಬಂತು. ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದ ಕಾರಣ ಮೊಬೈಲ್ ನೆಟ್‌ವರ್ಕ್ ಬಹುತೇಕವಾಗಿ ಜಾಮ್ ಆಗಿದ್ದು, ಸಂಪರ್ಕ, ಸಂವಹನಕ್ಕೆ ಅಡ್ಡಿಯಾ ಯಿತು. ಸಮಾವೇಶದ ಪ್ರತಿ ಹಂತದ ಚಿತ್ರೀಕರಣಕ್ಕೆ ವೀಡಿಗ್ರಾಫರ್‌ಗಳ ನಿಯೋಜನೆ ಮಾಡಲಾಗಿದ್ದು, ಭದ್ರತೆಯ ದೃಷ್ಟಿಯಿಂದ ಡ್ರೋನ್ ಮೂಲಕ ಕಣ್ಗಾವಲೂ ಇರಿಸಲಾಗಿದೆ. ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ತಡೆ ಉಂಟು ಮಾಡದಂತೆ ಆಯೋಜಕರು ಆಗಾಗ್ಗೆ ಧ್ವನಿ ವರ್ಧಕ ಮೂಲಕ ಸೂಚನೆ ನೀಡುತ್ತಿದ್ದಾರೆ.


ಶಾಂತಿಯುತ ಪ್ರತಿಟನೆಗೆ ಅವಕಾಶ ನೀಡಿ, ಉದ್ರೋಕಕಾರಿ ಘೋಷಣೆಗಳನ್ನು ಕೂಗದಂತೆ ಮನವಿಯನ್ನೂ ಮಾಡುತ್ತಿದ್ದಾರೆ.

ರಾಷ್ಟ್ರ ಧ್ವಜ ಹಾರಾಟ

ಸಮಾವೇಶದ ಮೈದಾನದಲ್ಲಿ ಭಾರೀ ಸಂಖ್ಯೆಯಲ್ಲಿ ಜನ ಸಮೂಹವೇ ಸೇರಿದ್ದರೆ, ಅಲ್ಲಲ್ಲಿ ರಾಷ್ಟ್ರ ಧ್ವಜ ಹಾರಾಟ ಪ್ರತಿಭಟನಾಕಾರರಿಗೆ ಹೊಸ ಚೈತನ್ಯ ನೀಡುತ್ತಿದೆ.



 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News