ಮೀಲಾದುನ್ನಬಿ: ಭಾವೈಕ್ಯ ವೇದಿಕೆ ಕೊಡಾಜೆ ವತಿಯಿಂದ ಸಿಹಿ ತಿಂಡಿ ವಿತರಣೆ

Update: 2024-09-16 16:58 GMT

ಬಂಟ್ವಾಳ:  ಮೀಲಾದುನ್ನಬಿ ಮೆರವಣಿಗೆಯಲ್ಲಿ ಭಾವೈಕ್ಯ ವೇದಿಕೆ ಕೊಡಾಜೆ ವತಿಯಿಂದ ಸಿಹಿ ತಿಂಡಿ ವಿತರಣೆ ಕಾರ್ಯಕ್ರಮ ಸೋಮವಾರ ನಡೆಯಿತು.

ಕೊಡಾಜೆ ಬದ್ರಿಯಾ ಜುಮಾ ಮಸೀದಿ, ತರ್ಬಿಯತುಲ್ ಇಸ್ಲಾಂ ಮದ್ರಸ ಹಿರಿಯ ವಿದ್ಯಾರ್ಥಿ ಸಂಘದ ವತಿಯಿಂದ ಸೋಮವಾರ ನಡೆದ ಮೀಲಾದುನ್ನಬಿ ಮೆರವಣಿಗೆಯಲ್ಲಿ ಕೊಡಾಜೆಯ ಭಾವೈಕ್ಯ ವೇದಿಕೆಯಿಂದ ಸಿಹಿ ತಿಂಡಿ ಹಂಚುವ ಮೂಲಕ ಪ್ರಶಂಸೆಗೆ ಪಾತ್ರರಾದರು.

ಇದೇ ಪರಿಸರದಲ್ಲಿ ಅನಂತಾಡಿ ಕರಿಂಕದ ಸಾರ್ವಜನಿಕ ಶ್ರೀ ಗಣೇಶೋತ್ಸವ ಹಾಗೂ ನೇರಳಕಟ್ಟೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ನಡೆದ ಶ್ರೀ ಗಣೇಶನ ಶೋಭಾಯಾತ್ರೆಯ ಸಂದರ್ಭ ಕೊಡಾಜೆ ಐಕ್ಯ ವೇದಿಕೆಯಿಂದ ಐಸ್ ಕ್ರೀಮ್ ಹಾಗೂ ನೀರು ವಿತರಿಸಿದ್ದರು.

ಈ ಸಂದರ್ಭ ಕೊಡಾಜೆ ಭಾವೈಕ್ಯ ವೇದಿಕೆಯ ಪ್ರಮುಖರಾದ ಸುದೀಪ್ ಕುಮಾರ್ ಶೆಟ್ಟಿ , ಬಾಲಕೃಷ್ಣ ಆಳ್ವ ಕೊಡಾಜೆ, ಸತೀಶ್ ಪೂಜಾರಿ ಕೊಪ್ಪರಿಗೆ, ಲಯನ್ ಡಾ. ಎ.ಮನೋಹರ ರೈ ಹಾಗೂ ಶೀತಲ್ ಗಣೇಶ ನಗರ ಮಾತನಾಡಿ ಪ್ರತಿಯೊಬ್ಬರೂ ತಮ್ಮ ತಮ್ಮ ಧರ್ಮವನ್ನು ಅನುಸರಿಸುವುದರ ಜೊತೆಗೆ ಸಹೋದರ ಧರ್ಮವನ್ನು ಗೌರವಿಸುವ ಮೂಲಕ ಶಾಂತಿ, ಸಾಮರಸ್ಯ, ಸೌಹಾರ್ದತೆಯ, ಜಾತ್ಯಾತೀತ ಭವ್ಯ ಭಾರತದ ನಿರ್ಮಾಣ ಸಾಧ್ಯ, ಇಂತಹ ಕಾರ್ಯಕ್ರಮಗಳು ರಾಷ್ಟ್ರದೆಲ್ಲಡೆ ನಡೆಯುವ ಮೂಲಕ ಸಹಬಾಳ್ವೆಯ ಬದುಕು ನಮ್ಮೆಲ್ಲರದಾಗಲಿ ಎಂದು ಅಭಿಪ್ರಾಯಪಟ್ಟರು.

ಭಾವೈಕ್ಯ ವೇದಿಕೆಯ ವಿಕೇಶ್ ಶೆಟ್ಟಿ, ನಿರಂಜನ್ ರೈ, ಮೋಹನ್ ಕರಿಂಕ, ಪ್ರವೀಣ್ ಕರಿಂಕ, ಸತೀಶ್ ಪೂಜಾರಿ ಬಾಯಿಲ, ಶರತ್ ಆಚಾರ್ಯ ಗಣೇಶ ನಗರ, ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಇಬ್ರಾಹಿಂ ಹಾಜಿ ರಾಜ್ ಕಮಲ್, ಕಾರ್ಯದರ್ಶಿ ನವಾಝ್ ಭಗವಂತ ಕೋಡಿ, ಕೋಶಾಧಿಕಾರಿ ರಫೀಕ್ ಹಾಜಿ ಸುಲ್ತಾನ್, ಖತೀಬ್ ಅಬ್ದುಲ್ ಅಝೀಝ್ ದಾರಿಮಿ ಪೊನ್ಮಳ, ಸದರ್ ಪಿ.ಎ.ಝಕರಿಯ ಅಸ್ಲಮಿ ಮರ್ದಾಳ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಇಬ್ರಾಹಿಂ ಕೆ.ಮಾಣಿ, ನೆಟ್ಲಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಲತೀಫ್ ನೇರಳಕಟ್ಟೆ, ತರ್ಬಿಯತುಲ್ ಇಸ್ಲಾಂ ಮದ್ರಸ ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಹೀಂ ಸುಲ್ತಾನ್, ಕಾರ್ಯದರ್ಶಿ ಇಂಜಿನಿಯರ್ ಲತೀಫ್ ಕೊಡಾಜೆ, ಕೋಶಾಧಿಕಾರಿ ನಝೀರ್ ಕೆಂಪು ಗುಡ್ಡೆ, ಕೊಡಾಜೆ ಐಕ್ಯ ವೇದಿಕೆಯ ಸದಸ್ಯರು ಭಾಗವಹಿಸಿದ್ದರು.













 


Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News