ಮೂಡುಬಿದಿರೆ: ಡಿ.10ರಿಂದ 'ಆಳ್ವಾಸ್ ವಿರಾಸತ್-2024'

Update: 2024-10-01 12:59 GMT

ಡಾ.ಎಂ. ಮೋಹನ ಆಳ್ವ

ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಪ್ರತೀ ವರ್ಷ ನಡೆಸಿಕೊಂಡು ಬರುತ್ತಿರುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ 'ಆಳ್ವಾಸ್ ವಿರಾಸತ್-2024' ಈ ಬಾರಿ ಡಿ.10ರಿಂದ 15ರ ವರೆಗೆ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಾಂಸ್ಕೃತಿಕ ಉತ್ಸವವು ವೈಭವೋಪೇತವಾಗಿ ಜರುಗಲಿದೆ. ಮೊದಲ 5 ದಿನಗಳು ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಆಹಾರೋತ್ಸವ, ಕರಕುಶಲ ವಸ್ತುಳು ಸಹಿತ ವಸ್ತು ಪ್ರದರ್ಶನಗಳಿಗೆ ಅವಕಾಶ ನೀಡಲಾಗಿದೆ. ಕೊನೆಯ ದಿನ ವಸ್ತು ಪ್ರದರ್ಶನಗಳಿಗಾಗಿಯೇ ಮೀಸಲಿಡಲಾಗಿದೆ ಎಂದರು.

ಇದರೊಂದಿಗೆ ಕಳೆದ 30 ವರ್ಷಗಳಿಂದ ನಡೆಸಿಕೊಂಡು ಬರಲಾಗುತ್ತಿರುವ ವಿರಾಸತ್  ಅಪೂರ್ವ ಮತ್ತು ವೈಭವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಸಂಘಟಿಸಿ ಸಂಸ್ಕೃತಿ ಪ್ರಿಯರಿಗೆ ರಸದೌತಣವನ್ನು ನೀಡಲು ಯೋಚಿಸಲಾಗಿದೆ. ಇದಕ್ಕಾಗಿ ಈಗಾಗಲೇ ಕಾರ್ಯಪ್ರವೃತ್ತರಾಗಿದ್ದು 'ಆಳ್ವಾಸ್ ವಿರಾಸತ್-2024'ನ್ನು ಅತ್ಯಂತ ಯಶಸ್ವೀ ಉತ್ಸವವಾಗಿಸುವಲ್ಲಿ ಪ್ರಯತ್ನಿಸಲಾಗುತ್ತಿದೆ ಎಂದರು. ಆಳ್ವಾಸ್ ಸಾಂಸ್ಕೃತಿಕ ಉತ್ಸವಕ್ಕೆ ಸಂಸ್ಕೃತಿ ಪ್ರಿಯರೂ, ಕಲಾಪ್ರೇಮಿಗಳೂ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವವನ್ನು ಯಶಸ್ವಿಗೊಳಿಸಬೇಕೆಂದು ಡಾ.ಎಂ. ಮೋಹನ ಆಳ್ವ ತಿಳಿಸಿದರು.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News