ಮೂಡುಬಿದಿರೆ: ಭೂ ದಾಖಲೆಗಳ ಡಿಜಿಟಲೀಕರಣದ ಕೊಠಡಿ ಉದ್ಘಾಟನೆ

Update: 2025-01-16 04:19 GMT

ಮೂಡುಬಿದಿರೆ: ಭೂಸುರಕ್ಷಾ ಯೋಜನೆಯಡಿಯಲ್ಲಿ ಅಭಿಲೇಖಾಲಯದ ಕಂದಾಯ ದಾಖಲೆಗಳನ್ನು ಗಣಕೀಕರಣಗೊಳಿಸುವ ಕಛೇರಿಯನ್ನು ಶಾಸಕ ಉಮಾನಾಥ್ ಎ.ಕೋಟ್ಯಾನ್ ಬುಧವಾರ ತಾಲೂಕು ಆಡಳಿತ ಸೌಧದಲ್ಲಿ ಉದ್ಘಾಟಿಸಿದರು.

ಈ ಸಂದರ್ಭ ಮಾತನಾಡಿದ ಅವರು, ಕಂದಾಯಕ್ಕೆ ಸಂಬಂಧಪಟ್ಟ ದಾಖಲೆಗಳು ವಷ೯ದಿಂದ ವಷ೯ಕ್ಕೆ ಹೆಚ್ಚಾಗುತ್ತಿದೆ. ಭೂಮಿಗೆ ಸಂಬಂಧಿಸಿದ ದಾಖಲೆಗಳನ್ನು ಬೇರೆ ಬೇರೆ ಕೋಣೆಗಳಲ್ಲಿ ಇಡಲಾಗಿದ್ದು ಅಗತ್ಯಕ್ಕೆ ಬೇಕಾದ ಹಾಗೆ ಸಿಗುವುದಿಲ್ಲ. ಎಲ್ಲಾ ದಾಖಲೆಗಳು ಒಂದೇ ಕಡೆಯಲ್ಲಿ ಸಿಗಬೇಕೆಂಬ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭೂ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ಹೊರಟಿದೆ. ದಾಖಲೆಗಳ ಸುರಕ್ಷತೆಯ ದೃಷ್ಟಿಯಿಂದ ಇದು ಉತ್ತಮ ಬೆಳವಣಿಗೆ ಎಂದರು.

ಪುರಸಭಾ ಸದಸ್ಯರಾದ ನವೀನ್ ಶೆಟ್ಟಿ, ಕೊರಗಪ್ಪ, ತಾ.ಪಂ.ಕಾಯ೯ ನಿವ೯ಹಣಾಧಿಕಾರಿ ಕುಸುಮಾಧರ, ಪುರಸಭಾ ಮುಖ್ಯಾಧಿಕಾರಿ ಇಂದು ಎಂ., ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ, ಸಹಕಾರಿ ಧುರೀಣ ದಯಾನಂದ ಪೈ, ವಿವಿಧ ಇಲಾಖೆಯ ಅಧಿಕಾರಿಗಳು ಈ ಸಂದರ್ಭದಲ್ಲಿದ್ದರು.

ತಾಲೂಕು ತಹಶೀಲ್ದಾರ್ ಪ್ರದೀಪ್ ಹುಡೇ೯ಕರ್ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News