ಮುಡಿಪು‌: ನವೋದಯ ವಿದ್ಯಾಲಯಕ್ಕೆ ಭಾಭಾ ಪರಮಾಣು ಸಂಶೋಧನಾ ಕೇಂದ್ರದ ವಿಜ್ಞಾನಿಗಳ ಭೇಟಿ; ವಿದ್ಯಾರ್ಥಿಗಳೊಂದಿಗೆ ಸಂವಾದ

Update: 2023-08-08 09:40 GMT

ಕೊಣಾಜೆ: ಭಾಭಾ ಪರಮಾಣು ಸಂಶೋಧನಾ ಕೇಂದ್ರದ ವಿಜ್ಞಾನಿಗಳಾದ ಡಾ. ಸ್ಮಿತಾ ಮಿಶ್ರಾ ಮತ್ತು ಡಾ. ವೃಂದಾಬನ್ ಮೋದಕ್ ಅವರು ಮುಡಿಪುವಿನ ಜವಹಾರ್ ನವೋದಯ ವಿದ್ಯಾಲಯದಲ್ಲಿ ಸೋಮವಾರ ನಡೆದ ಪರಮಾಣು ಜ್ಯೋತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ವಿಜ್ಞಾನ ಮತ್ತು ತಂತ್ರಜ್ಞಾನಗಳ‌ ಮಹತ್ವತೆ ಹಾಗೂ ಭಾರತವು ಈ ಕ್ಷೇತ್ರದಲ್ಲಿ ಮಾಡುತ್ತಿರುವ ಸಾಧನೆಗಳ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಮಾಹಿತಿಯನ್ನು ಹಂಚಿಕೊಂಡ ವಿಜ್ಞಾನಿಗಳು ವಿದ್ಯಾರ್ಥಿಗಳು ಕೇಳಿದ‌ ಕುತೂಹಲಕಾರಿ ಪ್ರಶ್ನೆಗಳಿಗೆ ಉತ್ತರಿಸಿದರು.

"ವಿದ್ಯಾರ್ಥಿಗಳಿಗೆ ವಿಜ್ಞಾನ" ಶೀರ್ಷಿಕೆಯಡಿಯಲ್ಲಿ ಅವರು ಶಾಲೆಯ ಲ್ಯಾಬ್‌ಗಳಿಗೆ ಭೇಟಿ ನೀಡಿ, ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ವಿಜ್ಞಾನಿಗಳಾದ ಡಾ. ಸ್ಮಿತಾ ಮಿಶ್ರಾ ಮತ್ತು ಡಾ. ವೃಂದಾಬನ್ ಮೋದಕ್ ಅವರನ್ನು ಮುಡಿಪು ನವೋದಯ ವಿದ್ಯಾಲಯದ ಪ್ರಾಂಶುಪಾಲರಾದ ಪಿ.ರಾಜೇಶ್ ಅವರು ವಿದ್ಯಾರ್ಥಿಗಳಿಗೆ ಈ ಅದ್ಭುತ ಅವಕಾಶವನ್ನು ನೀಡಿದ ಪರಮಾಣು ಶಕ್ತಿ ಇಲಾಖೆ ಮತ್ತು ನವೋದಯ ವಿದ್ಯಾಲಯ ಸಮಿತಿಯವರಿಗೆ ಕೃತಜ್ಞತೆ ಸಲ್ಲಿಸಿದರು. "ಈ ಇಬ್ಬರು ಪ್ರಖ್ಯಾತ ವಿಜ್ಞಾನಿಗಳ ಉಪಸ್ಥಿತಿಯು ನಮ್ಮ ವಿದ್ಯಾರ್ಥಿಗಳಿಗೆ ಉತ್ತಮ ಪ್ರೇರಣೆ ಮತ್ತು ಸ್ಫೂರ್ತಿಯಾಗಿದೆ" ಎಂದರು.

ಇದೇ ಸಂದರ್ಭದಲ್ಲಿ ವಿವಿಧ‌ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News