ಮೂಡುಬಿದಿರೆ: ನಿರ್ಮಾಣ ಹಂತದ ಕಟ್ಟಡದಿಂದ ಬಿದ್ದು ಯುವಕ ಮೃತ್ಯು

Update: 2024-09-05 16:37 GMT

ಮೂಡುಬಿದಿರೆ: ನಿರ್ಮಾಣ ಹಂತದ ಕಟ್ಟಡದಲ್ಲಿ ವೆಲ್ಡಿಂಗ್ ಕೆಲಸ ಮಾಡುತ್ತಿದ್ದ ಯುವಕನೋರ್ವ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಮೃತಪಟ್ಟ ಘಟನೆ ಮಂಗಳವಾರ ಸಂಜೆ ವಿದ್ಯಾಗಿರಿಯ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ವರದಿಯಾಗಿದೆ.

ಉತ್ತರ ಪ್ರದೇಶದ ಸಾಂಬಾಲ್ ಜಿಲ್ಲೆಯ ರಾಯಿಸ್ ಅಹ್ಮದ್‌ ಎಂಬವರ ಪುತ್ರ ಸಮೀರ್ (19) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ.

ಸಮೀ‌ರ್ ಕಳೆದ ಎರಡು ತಿಂಗಳ ಹಿಂದೆ ಆಳ್ವಾಸ್‌ ಶಿಕ್ಷಣ ಸಂಸ್ಥೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ವೆಲ್ಡಿಂಗ್‌ ಕೆಲಸಕ್ಕೆ ಸೇರಿಕೊಂಡಿದ್ದ. ಮಂಗಳವಾರ ಶಾಂಭವಿ ಹಾಸ್ಟೆಲ್‌ನ 5ನೇ ಮಹಡಿಯ ರೋಪ್ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಆತ ಕಾಲು ಜಾರಿ ಬಿದ್ದಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿ ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News