ನೆಕ್ಕಿಲಾಡಿ: ಚಾಲಕನ ನಿಯಂತ್ರಣ ತಪ್ಪಿ ಮನೆಯ ಅಂಗಳಕ್ಕೆ ನುಗ್ಗಿದ ಆ್ಯಂಬುಲೆನ್ಸ್

Update: 2024-12-09 04:11 GMT

ಉಪ್ಪಿನಂಗಡಿ: ಚಾಲಕನ ನಿಯಂತ್ರಣ ತಪ್ಪಿದ ಆ್ಯಂಬುಲೆನ್ಸೊಂದು ಮನೆಯ ಅಂಗಳಕ್ಕೆ ನುಗ್ಗಿದ ಘಟನೆ ಡಿ. 9ರಂದು ಬೆಳಗ್ಗೆ 34 ನೆಕ್ಕಿಲಾಡಿಯಲ್ಲಿ ನಡೆದಿದೆ.

ಪುತ್ತೂರಿನಿಂದ ನೆಕ್ಕಿಲಾಡಿ ಕಡೆಗೆ ಬರುತ್ತಿದ್ದ ಆ್ಯಂಬುಲೆನ್ಸ್ ಇಲ್ಲಿನ ವನಸುಮ ನರ್ಸರಿ ರಸ್ತೆಯಲ್ಲಿ ನೇರ ಸಾಗಿ ಮನೆಯೊಂದರ ವರಾಂಡಕ್ಕೆ ನುಗ್ಗಿದೆ. ಘಟನೆಯಿಂದ ಮನೆಯ ಆವರಣಗೋಡೆಗೆ ಹಾನಿಯಾಗಿದ್ದು, ಆ್ಯಂಬುಲೆನ್ಸ್ ಮನೆಯ ಗೋಡೆಗೆ ಢಿಕ್ಕಿಯಾಗುವುದು ಸ್ವಲ್ಪದರಲ್ಲೇ ತಪ್ಪಿದೆ. ಈ ಸಂದರ್ಭ ರಸ್ತೆ ಬದಿ ಶಾಲಾ ಮಕ್ಕಳು ನಿಂತಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ.

ಕನ್ಯಾಡಿಯ ಸೇವಾ ಭಾರತಿಗೆ ಸೇರಿದ ಆ್ಯಂಬುಲೆನ್ಸ್ ಇದಾಗಿದ್ದು, ಆರೋಗ್ಯ ಶಿಬಿರವೊಂದಕ್ಕೆ ತೆರಳುತ್ತಿದ್ದ ವೇಳೆ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಿಂದ ಆ್ಯಂಬುಲೆನ್ಸ್ ಚಾಲಕ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - jafar sadik

contributor

Byline - ವಾರ್ತಾಭಾರತಿ

contributor

Similar News