ನೆಕ್ಕಿಲಾಡಿ: ವ್ಯಕ್ತಿಯ ಮೃತದೇಹ ರಸ್ತೆಯಲ್ಲಿ ಪತ್ತೆ: ಹಿಟ್ ಆ್ಯಂಡ್ ರನ್ ಶಂಕೆ

Update: 2023-11-19 04:04 GMT

ಉಪ್ಪಿನಂಗಡಿ, ನ.19: ಇಲ್ಲಿನ 34 ನೆಕ್ಕಿಲಾಡಿಯ ಭಾರತ್ ಪೆಟ್ರೋಲ್ ಬಂಕ್ ಎದುರಿನ ರಾಷ್ಟ್ರೀಯ ಹೆದ್ದಾರಿ ಬಳಿ ವ್ಯಕ್ತಿಯೊಬ್ಬರ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಯಾವುದೋ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ.

ಮೃತರನ್ನು ಆಂಧ್ರ ಮೂಲದ ಶೇಖ್ ಖಾನ್ ಎಂದು ಗುರುತಿಸಲಾಗಿದೆ.

ಇಂದು ಬೆಳಗ್ಗೆ 7:30ರ ಸುಮಾರಿಗೆ ಘಟನೆ ಬೆಳಕಿಗೆ ಬಂದಿದ್ದು, ಮುಂಜಾನೆ ಯಾವುದೋ ವಾಹನ ಢಿಕ್ಕಿಯಾಗಿ ಪರಾರಿಯಾಗಿರಬಹುದು ಎಂದು ಶಂಕಿಸಲಾಗಿದೆ.

ಉಪ್ಪಿನಂಗಡಿ ಹಾಗೂ ಪುತ್ತೂರು ಸಂಚಾರಿ ಪೊಲೀಸರು ಸ್ಥಳಕ್ಕಾಗಮಿಸಿ, ಪರಿಶೀಲನೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News