ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2023-10-06 12:41 GMT

ಮಂಗಳೂರು, ಅ.6: ಪ್ರಸಕ್ತ (2023-24)ನೇ ಸಾಲಿಗೆ 1ನೇ ತರಗತಿಯಿಂದ 8ನೇ ತರಗತಿಯ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿ ಗಳಿಂದ 2023-24ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP)ಯಲ್ಲಿ 1ನೇ ತರಗತಿಯಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನಕ್ಕೆ ಅನ್‌ಲೈನ್ ಮೂಲಕ ಅರ್ಜಿಗಳನ್ನು ಅಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು. ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ ಶೇ.50 ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ 1 ಲಕ್ಷ ರೂ. ಒಳಗಿರಬೇಕು. ಅರ್ಜಿಯನ್ನು SSP ಪೋರ್ಟಲ್ ಅಡಿ ಸಲ್ಲಿಸಬೇಕು.

SSPಯಲ್ಲಿ ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗೆ ಇಲಾಖೆಯ ವೆಬ್‌ಸೈಟ್ https:// dom.karnataka.gov.in/dakshina_kannada/public ಅಥವಾ SSP ಪೋರ್ಟಲ್ https:// ssp.karnataka.gov.in ಅಥವಾ ಸಹಾಯವಾಣಿ: 8277799990/ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News