ವಿಟ್ಲ | ಗ್ರಾಹಕರ ಸೋಗಿನಲ್ಲಿ ವೈನ್ ಶಾಪ್ ನಿಂದ ಮೊಬೈಲ್ ಕಳ್ಳತನ: ಸಿಸಿಟಿವಿಯಲ್ಲಿ ದೃಶ್ಯ ಸೆರೆ

Update: 2023-12-11 07:44 GMT

ವಿಟ್ಲ, ಡಿ.11: ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ವೈನ್ ಶಾಪ್ ನಲ್ಲಿದ್ದ ಮೊಬೈಲ್ ನ್ನು ಎಗರಿಸಿದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದ್ದು, ಘಟನೆಯ ವಿಡಿಯೋ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ವಿಟ್ಲದ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ಗೆ ಗ್ರಾಹಕನಂತೆ ಬಂದಿದ್ದ ವ್ಯಕ್ತಿಯೊಬ್ಬ ಮದ್ಯ ಖರೀದಿಗೆ ಆರ್ಡರ್ ಮಾಡಿ ಟೇಬಲ್ ನಲ್ಲಿದ್ದ ವೈನ್ ಶಾಪ್ ನಲ್ಲಿರುವ ರಾಜೇಶ್ ಎಂಬವರ ಮೊಬೈಲ್ ನ್ನು ಚಾಲಾಕಿತನದಿಂದ ಎಗರಿಸಿ ಪರಾರಿಯಾಗಿದ್ದಾನೆ.

ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News