ಉರುಮನೆ ಅಲಿಫ್ ಪಬ್ಲಿಕ್ ಸ್ಕೂಲ್ ನ ಕ್ರೀಡಾಕೂಟ
Update: 2024-01-04 05:15 GMT
ದೇರಳಕಟ್ಟೆ, ಜ.4: ವಿದ್ಯಾರ್ಥಿಗಳು ಪಾಠದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲೂ ತೊಡಗಿಸಿಕೊಂಡು ದೇಶಕ್ಕೆ ಮಾದರಿ ಪ್ರಜೆಗಳಾಗಬೇಕು ಎಂದು ಕೊಣಾಜೆ ಪೊಲೀಸ್ ಠಾಣಾಧಿಕಾರಿ ವಿನೋದ್ ಕರೆ ನೀಡಿದ್ದಾರೆ.
ಅವರು ಉರುಮನೆ ಅಲಿಫ್ ಪಬ್ಲಿಕ್ ಸ್ಕೂಲ್ ನ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು.
ಮಂಗಳೂರಿನ ಲೆಕ್ಸ್ ಜೂರಿಸ್ ಲಾ ಚೇಂಬರ್ ನ ಯುವ ನ್ಯಾಯವಾದಿ ಆಸಿಫ್ ಬೈಕಾಡಿ ಕ್ರೀಡಾಪಟುಗಳಿಂದ ಗೌರವವಂದನೆ ಸ್ವೀಕರಿಸಿ ಪ್ರತಿಜ್ಞಾ ವಿಧಿ ಬೋಧಿಸಿದರು.
ಸಂಸ್ಥೆಯ ಅಧ್ಯಕ್ಷ ಎ.ಬಿ.ಹುಸೇನ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ವ್ಯವಸ್ಥಾಪಕ ಸಲೀಂ ಧ್ವಜಾರೋಹಣ ನೆರವೇರಿಸಿ ವಿದ್ಯಾರ್ಥಿಗಳಿಗೆ ಶುಭ ಕೋರಿದರು.
ಪೊಲೀಸ್ ಅಧಿಕಾರಿ ಅಭಿಷೇಕ್, ನ್ಯಾಯವಾದಿ ಮುಹಮ್ಮದ್ ಅಸ್ಗರ್ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡರು.
ಶಿಕ್ಷಕಿ ಲುಬ್ನಾ ಸ್ವಾಗತಿಸಿದರು. ಮೇಲ್ವಿಚಾರಕಿ ಆಯಿಷಾ ವಂದಿಸಿದರು. ನಿಶಾ ಉಮರ್ ಕಾರ್ಯಕ್ರಮ ನಿರೂಪಿಸಿದರು.