ಎಂಡಿಎಂಎ ಮಾರಾಟ: ಆರೋಪಿ ಸೆರೆ

Update: 2024-05-15 14:19 GMT

ಮಂಗಳೂರು, ಮೇ 15: ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯ ವಾಮಂಜೂರು ಮೈದಾನದಲ್ಲಿ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಆರೋಪಿಯನ್ನು ಪೆರ್ಮನ್ನೂರು ಗ್ರಾಮದ ದಾರಂದ ಬಾಗಿಲು ನಿವಾಸಿ ದಾವೂದ್ ಫರ್ವೇಝ್ (37) ಎಂದು ಗುರುತಿಸಲಾಗಿದೆ.

ಆರೋಪಿಯಿಂದ ಅಂದಾಜು 15 ಸಾವಿರ ರೂ. ಮೌಲ್ಯದ 10 ಗ್ರಾಂ ತೂಕದ ಎಂಡಿಎಂಎ ಹಾಗೂ 810 ರೂ. ವಶಪಡಿಸಿ ಕೊಳ್ಳಲಾಗಿದೆ. ಕಾರ್ಯಾಚರಣೆಯಲ್ಲಿ ಮಂಗಳೂರು ನಗರ ದಕ್ಷಿಣ ಉಪವಿಭಾಗದ ಎಸಿಪಿ ಧನ್ಯಾ ಎನ್.ನಾಯಕ್ ಆ್ಯಂಟಿ ಡ್ರಗ್ ತಂಡದ ಅಧಿಕಾರಿ ಮತ್ತು ಸಿಬ್ಬಂದಿ ವರ್ಗ ಹಾಗೂ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಎಸ್ಸೈ ಅರುಣ್ ಕುಮಾರ್ ಮತ್ತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News