ಫಾದರ್ ಮುಲ್ಲರ್ ಮೆಡಿಕಲ್ ಕಾಲೇಜು: ಶುಶ್ರೂಷಕಿಯರ ದಿನಾಚರಣೆ

Update: 2024-05-16 13:48 GMT

ಮಂಗಳೂರು , ಮೇ 16: ಫಾದರ್ ಮುಲ್ಲರ್ ನರ್ಸಿಂಗ್ ಕಾಲೇಜಿನ ಪ್ರಸೂತಿ ಮತ್ತು ಸ್ತ್ರೀರೋಗ ನರ್ಸಿಂಗ್ ವಿಭಾಗ ಮತ್ತು ಮಂಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಅಂತರ್‌ ರಾಷ್ಟ್ರೀಯ ಶುಶ್ರೂಷಕಿಯರ ದಿನಾಚರಣೆ ನಡೆಯಿತು.

ದ.ಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ ಅವರು ಸಮಾಜಕ್ಕೆ ಶುಶ್ರೂಷಕಿಯರು ಮತ್ತು ಆಶಾ ಕಾರ್ಯಕರ್ತೆಯರ ಅಮೂಲ್ಯ ಕೊಡುಗೆಯನ್ನು ತಿಳಿಸಿದರು. ಸಂಘಟನಾ ಕಾರ್ಯದರ್ಶಿ ರಮ್ಯಶ್ರೀ ಎಸ್ ಮಾತನಾಡಿದರು.

ಫಾದರ್ ಮುಲ್ಲರ್ ಚಾರಿಟೇಬಲ್ ಸಂಸ್ಥೆಗಳ ನಿರ್ದೇಶಕ ಫಾ. ರಿಚರ್ಡ್ ಅಲೋಶಿಯಸ್ ಕೊಯೆಲೋ ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ಆಶಾ ಕಾರ್ಯಕರ್ತೆ ದಮಯಂತಿ ಎನ್. ಅವರನ್ನು ಮಹಿಳೆಯರು ಮತ್ತು ಮಕ್ಕಳಿಗಾಗಿ ಸಲ್ಲಿಸಿದ ಸೇವೆಗಾಗಿ ಗೌರವಿಸಲಾಯಿತು. ಫಾದರ್ ಮುಲ್ಲರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಒಬಿಜಿ ವಿಭಾಗದ ಮುಖ್ಯಸ್ಥೆ ಡಾ. ದೀಪಾ ಕಣಗಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಲೆರಿಟಾ ಲೋಬೊ ವಂದಿಸಿದರು. ದಕ್ಷಿಣ ಕನ್ನಡದ ಒಟ್ಟು 66 ಆಶಾ ಕಾರ್ಯಕರ್ತೆಯರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News