ಜೀವ-ಜಲ ಉಳಿಸಲು ಸ್ವಯಂಪ್ರೇರಣೆಯ ಪಾಲ್ಗೊಳ್ಳುವಿಕೆ ಮುಖ್ಯ: ಪ್ರಭಾಕರ ಶರ್ಮಾ

Update: 2024-05-19 05:35 GMT

ಮಂಗಳೂರು: ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಯಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ತಮ್ಮ ಇತಿಮಿತಿಯಲ್ಲಿ ಸಣ್ಣ ಕೊಡುಗೆಗಳನ್ನು ನೀಡುವ ಮೂಲಕ ಪಾಲ್ಗೊಳ್ಳಬೇಕಾದ ಅಗತ್ಯವಿದೆ ಎಂದು ಇಂಡಿಯನ್ ರೆಡ್ ಕ್ರಾಸ್ ದ.ಕ. ಜಿಲ್ಲಾ ಘಟಕದ ಹಿರಿಯ ಸಲಹೆಗಾರ ಪ್ರಭಾಕರ ಶರ್ಮಾ ತಿಳಿಸಿದ್ದಾರೆ.

ನಗರದ ಲಾಲ್ ಬಾಗ್ ವನಿತಾ ಪಾರ್ಕ್ನಲ್ಲಿ ದ.ಕ. ಜಿಲ್ಲಾಡಳಿತ, ಬ್ಯಾಂಕ್ ಆಫ್ ಬರೋಡಾ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಸಹಿತ ವಿವಿಧ ಸಂಸ್ಥೆಗಳ ಸಹಯೋಗದಲ್ಲಿ ಶನಿವಾರ ನಡೆದ ಜೀವ-ಜಲ ಉಳಿಸಿ ಅಭಿಯಾನ ಕಾರ್ಯಕ್ರಮವನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ನಗರದಲ್ಲಿ ಕಾಂಕ್ರಿಟ್ ಕಟ್ಟಡಗಳು ಸಹಿತ ವಿವಿಧ ಕಾಮಗಾರಿಗಳ ಸಂದರ್ಭ ಪರಿಸರದ ಮೇಲೆ ಆಕ್ರಮಣ ನಡೆಯುತ್ತಿದೆ. ಈ ವೇಳೆ ಪ್ರತಿಯೊಬ್ಬರು ತಮ್ಮ ಮಿತಿಯಲ್ಲಿ ನೀರಿನ ಮಿತ ಬಳಕೆ, ಪರಿಸರ ಸಂರಕ್ಷಣೆಗೆ ಭವಿಷ್ಯದ ದೃಷ್ಟಿಯಿಂದ ಕೊಡುಗೆ ನೀಡುವ ಅಗತ್ಯವಿದೆ ಎಂದು ಪ್ರಭಾಕರ ಶರ್ಮಾ ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ದ.ಕ. ಜಿಪಂ ಯೋಜನಾ ನಿರ್ದೇಶಕ ಜಯರಾಮ್, ಬ್ಯಾಂಕ್ ಆಫ್ ಬರೋಡಾ ಮಂಗಳೂರು ವಿಭಾಗದ ಹಿರಿಯ ಪ್ರಬಂಧಕ ಎಡ್ರಿಚ್ ಡಿಸೋಜ, ಮುಖ್ಯ ಪ್ರಬಂಧಕ ಸತೀಶ್ ಪಾಟ್ಕರ್, ದ.ಕ. ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ.ಹರೀಶ್ ರೈ, ದೇವಿಕಾ ಯೋಗ ತರಬೇತಿ ಕೇಂದ್ರದ ನಿರ್ದೇಶಕಿ ದೇವಿಕಾ ಪುರುಷೋತ್ತಮ, ಇನ್ನರ್ ವ್ಹೀಲ್ ಕ್ಲಬ್ ಮಂಗಳೂರು ನಾರ್ತ್ ಅಧ್ಯಕ್ಷೆ ಗೀತಾ ಬಿ. ರೈ, ನಿಕಟಪೂರ್ವ ಅಧ್ಯಕ್ಷೆ ವಸಂತಿ ಕಾಮತ್, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ಸತೀಶ್ ಇರಾ ಮತ್ತಿತರರು ಉಪಸ್ಥಿತರಿದ್ದರು.

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್. ವಂದಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - Haneef

contributor

Byline - ವಾರ್ತಾಭಾರತಿ

contributor

Similar News