ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಆರ್. ಅಶೋಕ್ ಆರೋಪ

Update: 2024-06-12 14:47 GMT

ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ತಾಲಿಬಾನ್ ಮಾದರಿಯ ಆಡಳಿತ ನಡೆಸುತ್ತಿದೆ. ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ವಿಧಾನ ಸಭೆಯ ವಿಪಕ್ಷ ನಾಯಕ ಆರ್ ಅಶೋಕ್ ಆರೋಪಿಸಿದರು.

ಅವರು ಇಂದು ದಕ್ಷಿಣ ಕನ್ನಡ ಜಿಲ್ಲೆಗೆ ಭೇಟಿ ನೀಡಿ ಬೊಳಿಯಾರ್ ಘಟನೆಗೆ ಸಂಬಂಧಿಸಿದಂತೆ ಚೂರಿ ಇರಿತದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿದ ಬಳಿಕ ಬಿಜೆಪಿ ಕಚೇರಿಯಲ್ಲಿ ಹಮ್ಮಿಕೊಂಡ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.

ಕರಾವಳಿ ಭಾಗದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ‌ ನಿರಂತರವಾಗಿ ಹಲ್ಲೆ ನಡೆಯುತ್ತಿದೆ. ಬೋಳಿಯಾರ್ ನಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಇರಿದು ಕೊಲೆಗೆ ಯತ್ನಿಸಲಾಗಿದೆ. ಇದು ಪೂರ್ವ ಯೋಜಿತ ಕೃತ್ಯ ಎಂದರು.

ಬಿಜೆಪಿ ಕಾರ್ಯಕರ್ತರು ಪೊಲೀಸರು ಹೇಳುವಂತೆ ಪ್ರಚೋದನಕಾರಿ ಘೋಷಣೆ ಕೂಗಿದ್ದರೆ ಪೊಲೀಸರು ದಾಖಲೆ ನೀಡಲಿ. ಬಿಜೆಪಿ ಕಾರ್ಯಕರ್ತರು ಭಾರತ್ ಮಾತಾಕಿ ಜೈ ಎನ್ನುವ ಘೋಷಣೆ ಕೂಗಿದ್ದಾರೆ ಎಂದು ಅಶೋಕ್ ಸಮರ್ಥಿಸಿದರು.

ನಾಳೆ ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಯಲಿದೆ. ವಿಧಾನ ಸಭೆಯಲ್ಲಿ ಹೋರಾಟ ನಡೆಯಲಿದೆ. ಗಾಯಾಳುಗಳಿಗೆ ಜಿಲ್ಲಾಡಳಿತ ಚಿಕಿತ್ಸೆಯ ವೆಚ್ಚ ನೀಡಬೇಕು. ಅಮಾಯಕ ಕಾರ್ಯಕರ್ತರ ಮೇಲೆ ಹಾಕಲಾದ ಕೇಸನ್ನು ವಾಪಸ್ ಪಡೆಯಬೇಕು. ಪಕ್ಷದಿಂದಲೂ ನೆರವು ನೀಡಲಾಗುವುದು. ರಾಜ್ಯದಲ್ಲಿ ಕಾಂಗ್ರೆಸ್ ನ ಸಾಧನೆ ಕಳೆದ ಒಂದು ವರ್ಷದಲ್ಲಿ ಶೂನ್ಯ.‌ ಇದು ಲೋಕಸಭೆ ಚುನಾವಣೆಯಲ್ಲಿ ಸಾಬೀತಾಗಿದೆ ಎಂದರು.

ಮುಂದಿನ ತಾ.ಪಂ ಜಿ.ಪಂ, ಬಿಬಿಎಂಪಿ ಚುನಾವಣೆಯಲ್ಲಿಯೂ ಜೆಡಿಎಸ್ ಜತೆಗಿನ ಮೈತ್ರಿ ಮುಂದುವರಿಯಲಿದೆ ಎಂದು ರಾಜ್ಯದಲ್ಲಿ ಜೆಡಿಎಸ್ -ಬಿಜೆಪಿ ಮೈತ್ರಿ ಬಗ್ಗೆ ಅಶೋಕ್ ಸ್ಪಷ್ಟ ಪಡಿಸಿದರು.

ಸುದ್ದಿಗೋಷ್ಡಿಯಲ್ಲಿ ಸಂಸದ ಬ್ರಿಜೇಶ್ ಚೌಟ, ಶಾಸಕರಾದ ವೇದವ್ಯಾಸ ಕಾಮತ್, ಹರೀಶ್ ಪೂಂಜ, ಭರತ್ ಶೆಟ್ಟಿ, ಪ್ರತಾಪ್ ಸಿಂಹ ನಾಯಕ್, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News