ಅನುದಾನಿತ ಶಾಲಾ ಕಾಲೇಜುಗಳ ಸಮಸ್ಯೆಗಳ ಪರಿಹಾರಕ್ಕೆ ಸರಕಾರಕ್ಕೆ ಮನವಿ

Update: 2024-06-12 15:00 GMT

ಮಂಗಳೂರು, ಜೂ.12: ರಾಜ್ಯದಲ್ಲಿ ಅನುದಾನಿತ ಶಾಲಾ ಕಾಲೇಜುಗಳು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಅನುದಾನಿತ ಶಾಲಾ ಕಾಲೇಜುಗಳ ಸಂಘದ ಪದಾಧಿಕಾರಿಗಳು ಸರಕಾರವನ್ನು ಆಗ್ರಹಿಸಿದೆ.

ಅನುದಾನಿತ ಶಾಲಾ ಕಾಲೇಜುಗಳ ಸಂಘದ ಪದಾಧಿಕಾರಿಗಳು ಕರ್ನಾಟಕ ರಾಜ್ಯ ವಿಧಾನ ಪರಿಷತ್ತಿನ ಸಭಾಪತಿಗಳು ಮತ್ತು ಶಿಕ್ಷಕ ಕ್ಷೇತ್ರದ ಪ್ರತಿನಿಧಿ ಆಗಿರುವ ಬಸವರಾಜ ಹೊರಟ್ಟಿ ಅವರನ್ನು ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಅವರ ಮೂಲಕ ಭೇಟಿಯಾಗಿ ಸರಕಾರಕ್ಕೆ ಮನವಿಯನ್ನು ಅರ್ಪಿಸಿದ್ದಾರೆ.

ಇಂದು ಅನುದಾನಿತ ಶಾಲಾ ಕಾಲೇಜುಗಳು ಬಹಳಷ್ಟು ಸಮಸ್ಯೆಗಳನ್ನು ಎದುರಿಸುತ್ತಿವೆ ವರ್ಷದಿಂದ ವರ್ಷಕ್ಕೆ ಹಲವಾರು ಅನುದಾನಿತ ವಿದ್ಯಾ ಸಂಸ್ಥೆಗಳು ವಿದ್ಯಾರ್ಥಿಗಳ ಕೊರತೆ ಹಾಗೂ ಇತರ ಸಮಸ್ಯೆಗಳಿಂದ ಮುಚ್ಚುತ್ತಿವೆ. ಕಳೆದ ಒಂದೆರಡು ವರ್ಷಗಳಿಂದ ಅನುದಾನಿತ ಶಾಲೆಗಳು ಮಾನ್ಯತೆ ನವೀಕರಣಕ್ಕಾಗಿ ಬಹಳಷ್ಟು ಶ್ರಮಪಡಿಸು ಪಡುವಂತಹ ಅವಶ್ಯಕತೆ ಉಂಟಾಗಿದೆ. ಬೆಂಕಿಯಿಂದ ಸುರಕ್ಷತೆ ಕಟ್ಟಡ ಸುರಕ್ಷತೆಯ ಪ್ರಮಾಣ ಪತ್ರಗಳನ್ನು ನೀಡಬೇಕಾಗುತ್ತದೆ. ಈ ಪ್ರಮಾಣ ಪತ್ರವನ್ನು ನೀಡಬೇಕಿದ್ದರೆ ಲಕ್ಷಾಂತರ ರೂಪಾಯಿ ಖರ್ಚಾಗುತ್ತೆ. ಆದರೆ ಇತರ ಯಾವುದೇ ಆದಾಯವಿಲ್ಲದೆ ಅನುದಾನಿತ ಶಾಲೆಗಳು ಸಮಸ್ಯೆ ಎದುರಿಸುವಂತಾಗಿದೆ. ಇದನ್ನು ನೀಡದ ಅನುದಾನಿತ ಶಿಕ್ಷಣ ಸಂಸ್ಥೆಗಳನ್ನು ಮಾನ್ಯತೆ ನವೀಕರಣದ ಹೆಸರಿನಲ್ಲಿ ಸತಾಯಿಸಲಾಗುತ್ತದೆ. ಆದುದರಿಂದ 2018ನೇ ವರ್ಷಕ್ಕಿಂತ ಮುಂಚಿತವಾಗಿ ಪ್ರಾರಂಭವಾದ ಶಾಲೆಗಳಿಗೆ ಸುರಕ್ಷತೆ ಮತ್ತು ಕಟ್ಟಡ ಸುರಕ್ಷತೆ ನಿಯಮಾವಳಿಗಳನ್ನು ಕೈ ಬಿಡಬೇಕೆಂದು ಆಗ್ರಹಿಸಿದ್ದಾರೆ.

ಅನುದಾನಿತ ವಿದ್ಯಾ ಸಂಸ್ಥೆಗಳು ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಮಕ್ಕಳಿಗೆ ಮಧ್ಯಾಹ್ನದ ಉಪಹಾರ ಯೋಜನೆ ಗಳನ್ನು ಬೇಯಿಸಿಕೊಳ್ಳುವದರಿಂದ ಗ್ರೈಂಡರ್ ಇತ್ಯಾದಿಗಳನ್ನು ಉಪಯೋಗಿಸುತ್ತದೆ. ಇದಕ್ಕಾಗಿ ವಿದ್ಯುತ್ ಶಕ್ತಿಗಾಗಿ ತುಂಬಾ ಹಣದ ವ್ಯಯವಾಗುತ್ತದೆ. ಆದುದರಿಂದ ರಾಜ್ಯ ಸರಕಾರವು ಸರಕಾರಿ ಶಾಲೆಗಳಿಗೆ ನೀಡಿದಂತೆ ಅನುದಾನಿತ ಶಾಲೆಗಳಿಗೂ ಉಚಿತ ವಿದ್ಯುತ್ ವ್ಯವಸ್ಥೆಯನ್ನು ಮತ್ತು ನೀರಿನ ವ್ಯವಸ್ಥೆಯನ್ನು ಒದಗಿಸುವಂತೆ ಸಂಘದ ಪದಾಧಿಕಾರಿಗಳು ಸರಕಾರಕ್ಕೆ ಮನವಿ ಮಾಡಿದ್ದಾರೆ. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಭಾಪತಿಗಳು ಶೀಘ್ರವೇ ಸಂಬಂಧಿಸಿದವರಲ್ಲಿ ಚರ್ಚಿಸುವುದಾಗಿ ಭರವಸೆಯನ್ನು ನೀಡಿದರು

ಸಭಾಪತಿಯವರನ್ನು ಭೇಟಿಯಾದ ನಿಯೋಗದಲ್ಲಿ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸಂಘ, ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘ, ಪದವಿಪೂರ್ವ ಶಿಕ್ಷಕರ ಸಹಕಾರಿ ಸಂಘ, ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಪದಾಧಿಕಾರಿಗಳು ಇದ್ದರು.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News