ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ ʼಗೌರವ ಪ್ರಶಸ್ತಿʼಗೆ ಅರ್ಜಿ ಆಹ್ವಾನ

Update: 2024-07-05 17:23 GMT

ಮಂಗಳೂರು: ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯ 2022 ಮತ್ತು 2023ನೇ ಸಾಲಿನ ‘ಗೌರವ ಪ್ರಶಸ್ತಿ’ಗೆ ಅರ್ಜಿಗಳನ್ನು ಆಹ್ವಾನಿಸಿದ್ದು, ಬ್ಯಾರಿ ಭಾಷಾ ಕ್ಷೇತ್ರ, ಬ್ಯಾರಿ ಕಲಾ ಕ್ಷೇತ್ರ ಮತ್ತು ಬ್ಯಾರಿ ಸಾಹಿತ್ಯ-ಸಂಶೋಧನಾ/ಅಧ್ಯಯನ ಕ್ಷೇತ್ರ ಈ ಮೂರು ಕ್ಷೇತ್ರಗಳಲ್ಲಿ ಗಣನೀಯವಾಗಿ ಸೇವೆ ಸಲ್ಲಿಸಿದ ಒಟ್ಟು 6 ಮಂದಿ ಮಹನೀಯರನ್ನು 2022ನೇ ಮತ್ತು 2023ನೇ ಸಾಲಿನ ಪ್ರಶಸ್ತಿಗೆ ಪರಿಗಣಿಸಲಾಗುವುದು.

ಗೌರವ ಪ್ರಶಸ್ತಿಯು 50,000 ರೂ. ನಗದು ಪ್ರಮಾಣ ಪತ್ರ, ಸ್ಮರಣಿಕೆ ಮತ್ತು ಫಲಪುಷ್ಪಾಹಾರಗಳನ್ನು ಒಳಗೊಂಡಿರು ತ್ತದೆ. ಪ್ರತಿಯೊಂದು ಕ್ಷೇತ್ರಕ್ಕೆ ಒಬ್ಬರಂತೆ 2022ನೇ ಸಾಲಿಗೆ 3 ಮಂದಿ ಹಾಗೂ 2023ನೇ ಸಾಲಿಗೆ 3 ಮಂದಿ ಸಾಧಕ ರನ್ನು ಗೌರವ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಅರ್ಜಿಗಳನ್ನು ಸ್ವತ: ಸಾಧಕರೇ ಸಲ್ಲಿಸಬಹುದು ಅಥವಾ ಸಾಧಕರ ಪರವಾಗಿ ಇತರರು ಶಿಫಾರಸ್ಸು ಮಾಡಿ ಅರ್ಜಿ ಸಲ್ಲಿಸಬಹುದು. ಹಿಂದಿನ ಸಾಲಿನಲ್ಲಿ ಪ್ರಶಸ್ತಿಗೆ ಅರ್ಜಿ ಸಲ್ಲಿಸಿರುವ, ಆದರೆ ಪ್ರಶಸ್ತಿಗೆ ಆಯ್ಕೆ ಆಗದಿರುವ ಸಾಧಕರ ಅರ್ಜಿಗಳನ್ನು ಈ ವರ್ಷವೂ ಪರಿಗಣಿಸಲಾಗುವುದು. ಆದರೆ ಸಾಧನೆಯ ಪೂರಕ ವಿವರಗಳಿದ್ದಲ್ಲಿ ಅಕಾಡೆಮಿಗೆ ಕಳುಹಿಸಿಕೊಡಬಹುದು. ಹೊಸದಾಗಿ ಅರ್ಜಿ ಸಲ್ಲಿಸುವವರು ವ್ಯಕ್ತಿ ಪರಿಚಯದ ಎಲ್ಲಾ ಮಾಹಿತಿಗಳನ್ನು ಕಳುಹಿಸಬೇಕು. ಅರ್ಜಿಯನ್ನು ಭಾವಚಿತ್ರ ಹಾಗೂ ದಾಖಲೆಗಳ ಜೆರಾಕ್ಸ್ ಪ್ರತಿಗಳೊಂದಿಗೆ ಅಕಾಡೆಮಿಗೆ ಕಳುಹಿಸಿ ಕೊಡಬೇಕು.

ಪ್ರಶಸ್ತಿಗೆ ಅರ್ಜಿ ಸಲ್ಲಿಸುವವರು ಲಕೋಟೆಯ ಮೇಲೆ ‘ ಬ್ಯಾರಿ ಅಕಾಡೆಮಿ ಗೌರವ ಪ್ರಶಸ್ತಿ’ ಎಂದು ಬರೆದು, ರಿಜಿಸ್ಟ್ರಾರ್, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ, ಸಾಮರ್ಥ್ಯ ಸೌಧ, 2ನೇ ಮಹಡಿ, ಮಂಗಳೂರು ತಾಲೂಕು ಪಂಚಾಯತ್ ಹಳೇ ಕಟ್ಟಡ, ಮಿನಿ ವಿಧಾನ ಸೌಧದ ಬಳಿ, ಮಂಗಳೂರು-575001 ಈ ವಿಳಾಸಕ್ಕೆ ಅಥವಾ bearyacademy@yahoo.in ಇ-ಮೇಲ್‌ಗೆ ಜುಲೈ 20ರ ಒಳಗೆ ಸಲ್ಲಿಸುವಂತೆ ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು. ಎಚ್. ಪತ್ರಿಕಾ ಪ್ರಕಟನೆಯಲ್ಲಿ ವಿನಂತಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News