ಶಾಸಕ ಭರತ್ ಶೆಟ್ಟಿಗೆ ಕಾವೂರು ಪೊಲೀಸ್ ಠಾಣೆಯಿಂದ ನೋಟೀಸ್‌ ಜಾರಿ

Update: 2024-07-11 13:15 GMT

ಶಾಸಕ ಭರತ್ ಶೆಟ್ಟಿ

ಮಂಗಳೂರು, ಜು.11: ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ  ಮಂಗಳೂರು ನಗರ ಉತ್ತರ ಕ್ಷೇತ್ರದ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾರುವ ಹಿನ್ನೆಲೆಯಲ್ಲಿ ಪೊಲೀಸರು ನೋಟೀಸ್ ಜಾರಿ ಮಾಡಿದ್ದರೆ.

ಮೂರು ದಿನಗಳ ಒಳಗಾಗಿ ಈ ಸಂಬಂಧ ಪೊಲೀಸ್ ಠಾಣೆಗೆ ಹಾಜರಾಗುವಂತೆ ಕಾವೂರು ಪೊಲೀಸ್ ಇನ್ಸ್‌ಪೆಕ್ಟರ್ ರಾಘವೇಂದ್ರ ಬೈಂದೂರು ನೋಟೀಸ್ ಜಾರಿಗೊಳಿಸಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆ ಸದಸ್ಯ ಅನಿಲ್ ಕುಮಾರ್ ನೀಡಿರುವ ದೂರಿನಂತೆ ಶಾಸಕ ಭರತ್ ಶೆಟ್ಟಿ ವಿರುದ್ಧ ಕಾವೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News