ಮೌಲಾನಾ ಆಝಾದ್ ಪದವಿಪೂರ್ವ ಕಾಲೇಜು ಪ್ರವೇಶಾತಿಗೆ ಅರ್ಜಿ

Update: 2024-07-26 14:21 GMT

ಮಂಗಳೂರು: ದ.ಕ. ಜಿಲ್ಲೆಯಲ್ಲಿ ನೂತನವಾಗಿ ಆರಂಭಗೊಳ್ಳಲಿರುವ ಮಂಜನಾಡಿಯ ಮೌಲಾನಾ ಆಜಾದ್ ಮಾದರಿ ಪದವಿ ಪೂರ್ವ ಕಾಲೇಜು ಮತ್ತು ಪುದು ಮೌಲಾನಾ ಆಜಾದ್ ಮಾದರಿ ಶಾಲೆಗೆ ಶೈಕ್ಷಣಿಕ ವರ್ಷ 2024-25ನೇ ಸಾಲಿನಲ್ಲಿ ಪ್ರಥಮ ಪಿಯುಸಿ ತರಗತಿಗೆ ವಿಜ್ಞಾನ ವಿಭಾಗ (ಪಿಸಿಎಂಬಿ) ಉಚಿತ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಅಲ್ಪಸಂಖ್ಯಾತರ ಸಮುದಾಯದವರಿಗೆ ಸೇರ್ಪಡೆಗೆ ಶೇ ೭೫ರಷ್ಟು ಮಿಸಲಾತಿ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗದ ವಿದ್ಯಾರ್ಥಿಗಳಿಗೆ ಶೇ. ೨೫ರಷ್ಟು ಮೀಸಲಾತಿ ಅವಕಾಶ ಇದೆ. ಪ್ರತಿ ವಿದ್ಯಾರ್ಥಿಗೆ ಉಚಿತವಾಗಿ ಸಮವಸ್ತ್ರ, ಬೂಟು, ಕಾಲು ಚೀಲ ಪೂರೈಕೆ, ಪಠ್ಯ ಪುಸ್ತಕ ಮತ್ತು ಲೇಖನ ಸಾಮಾಗ್ರಿ ನೀಡಲಾಗುತ್ತದೆ. ಶಾಲೆಗಳಲ್ಲಿ ಪ್ರಯೋಗ ಶಾಲೆ ಉಪಕರಣ, ಬೋಧನ ಸಲಕರಣೆ, ಕ್ರೀಡಾ ಸಾಮಾಗ್ರಿ, ಗ್ರಂಥಾಲಯಗಳ ಸೌಲಭ್ಯಗಳನ್ನು ಒದಗಿಸಲಾಗುತ್ತದೆ.

ಅರ್ಜಿಗಳನ್ನು ಮೌಲಾನಾ ಆಜಾದ್ ಮಾದರಿ ಪದವಿಪೂರ್ವ ಕಾಲೇಜು ಮಂಜನಾಡಿ, ಮತ್ತು ಪುದು ಇಲ್ಲಿಗೆ ನೇರವಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗೆ ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಪಾಂಡೇಶ್ವರ ದ.ಕ ಮತ್ತು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಂಪರ್ಕಿಸಬಹುದಾಗಿದೆ. ಸಹಾಯವಾಣಿ ಸಂಖ್ಯೆ : 9686445399, 9742972679, 9945176137ಸಂಪರ್ಕಿಸುವಂತೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಜಿಲ್ಲಾ ಅಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News