ಬಂಟ್ವಾಳ: ಜುಗಾರಿ ಅಡ್ಡೆಗೆ ದಾಳಿ; ಮೂವರು ಆರೋಪಿಗಳ ಬಂಧನ

Update: 2024-07-26 14:58 GMT

ಬಂಟ್ವಾಳ : ಮನೆಯೊಂದರಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಪೊಲೀಸರು ಆರೋಪಿಗಳ ಸಹಿತ ಆಟಕ್ಕೆ ಬಳಸಿದ ನಗದು ಹಾಗೂ ಇತರ ವಸ್ತುಗಳನ್ನು ವಶಪಡಿಸಿಕೊಂಡ ಘಟನೆ ಪಿಲಿಮೊಗ್ರು ಗ್ರಾಮದ ನಡಾಯಿ ಎಂಬಲ್ಲಿ ನಡೆದಿದೆ.

ಬಂಧಿತರನ್ನು ಶಿವರಾಮ ನಾಯಕ್‌ (56), ಗೋಪಾಲ (41), ಯೋಗೀಶ ಪ್ರಭು, (46) ಎಂದು ಹೆಸರಿಸಲಾಗಿದ್ದು, ಜಯಣ್ಣ ಅಲಿಯಾಸ್ ಜಯಚಂದ್ರ ಬೊಳ್ಳಾರ್ ಎಂಬಾತ ಪೊಲೀಸರ ಕೈಗೆ ಸಿಗದೆ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಜಯಚಂದ್ರ ಬೊಳ್ಳಾರ್ ಎಂಬಾತನ ಮನೆಯೊಳಗೆ ಅಕ್ರಮವಾಗಿ ಜುಗಾರಿ ಅಡ್ಡೆ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸ್‌ ಇನ್ಸ್ ಪೆಕ್ಟ‌ರ್ ಶಿವಕುಮಾ‌ರ್ ನೇತೃತ್ವದ ಪೊಲೀಸರು ದಾಳಿ ನಡೆಸಿ ಕಾರ್ಯಾಚರಣೆ ನಡೆಸಿದ್ದಾರೆ.

ದಾಳಿ ವೇಳೆ ಸ್ಥಳದಲ್ಲಿ ದೊರೆತ 28,120 ರೂ. ನಗದು ಸಹಿತ ಇತರೆ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - Riyaz

contributor

Byline - ವಾರ್ತಾಭಾರತಿ

contributor

Similar News