ಪುತ್ತೂರು| ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಉಪನ್ಯಾಸಕಿ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು

Update: 2024-09-12 18:48 IST
ಪುತ್ತೂರು| ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಉಪನ್ಯಾಸಕಿ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು
  • whatsapp icon

ಪುತ್ತೂರು: ಕಳೆದ 6 ದಿನಗಳ ಹಿಂದೆ ಪುತ್ತೂರು ತಾಲೂಕಿನ ಈಶ್ವರಮಂಗಲದ ಮೇನಾಲ ಎಂಬಲ್ಲಿ ಬೈಕ್ ಅಪಘಾತಕ್ಕೆ ಈಡಾಗಿ ಗಂಭೀರ ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅತಿಥಿ ಉಪನ್ಯಾಸಕಿ ಮಹಿಳೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ರಾತ್ರಿ ಮೃತಪಟ್ಟಿದ್ದಾರೆ.

ಪುತ್ತೂರು ತಾಲೂಕಿನ ಮಾಡಾವು ಜ್ಯೂನಿಯರ್ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕಿಯಾಗಿರುವ ಸುನಂದ ಅಚ್ಚುತ ಪೂಜಾರಿ ಮೃತ ಪಟ್ಟವರು. ಅವರು ಸುಳ್ಯದ ವೀರಮಂಗಲ ನಿವಾಸಿಯಾಗಿದ್ದು ಪ್ರಸ್ತುತ ಬಂಟ್ವಾಳ ತಾಲೂಕಿನ ಕಾಮಾಜೆ ಸರ್ಕಾರಿ ಪದವಿ ಕಾಲೇಜ್‍ನಲ್ಲಿ ಉಪನ್ಯಾಸಕರಾಗಿರುವ ಡಾ. ಅಚ್ಚುತ ಪೂಜಾರಿ ಅವರ ಪತ್ನಿಯಾಗಿದ್ದಾರೆ.

ಕಳೆದ ಶುಕ್ರವಾರ ಸುನಂದ ಅವರು ತಮ್ಮ ಕುಟುಂಬದ ತರವಾಡು ಮನೆಯಾದ ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದರೆಂದೂ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ ಜಾರಿ ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಭಾಗಕ್ಕೆ ಗಂಭೀರ ಗಾಯಗೊಂಡಿದ್ದರು. ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News